ಸ್ಯಾಂಡಲ್ ವುಡ್ ಕಿಂಗ್ ಗೆ ಗೌರವ ಡಾಕ್ಟರೇಟ್
ಕನ್ನಡ ಚಿತ್ರರಂಗದಲ್ಲಿ ಸ್ಯಾಂಡಲ್ ವುಡ್ ಕಿಂಗ್ ಎಂದು ಹೆಸರು ಪಡೆದಿರುವ ಕನ್ನಡ ಚಿತ್ರರಂಗದ ದಂತಕಥೆ ಡಾ.ರಾಜ್‌ಕುಮಾರ್ ಅವರ ಪುತ ಶಿವರಾಜ್ ಕುಮಾರ್ ಅವರಿಗೆ ಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದೆ.
1986ರಲ್ಲಿ ಆನಂದ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶಿವರಾಜ್ ಕುಮಾರ್ ತಮ್ಮ ಚುರುಕಾದ ನಟನಾ ಕೌಶಲ್ಯದಿಂದ ಕನ್ನಡ ಚಿತ್ರರಂಗದ ಬೆಳ್ಳಿ ತೆರೆಯಲ್ಲಿ ಜನಪ್ರಿಯತೆ ಪಡೆದರು. ಓಂ, ಜನುಮದ ಜೋಡಿ, ನಮ್ಮೂರ ಮಂದಾರ ಹೂವೆ, ಅಣ್ಣ ತಂಗಿ, ತವರಿಗೆ ಬಾ ತಂಗಿ ಮತ್ತು ಇನ್ನೂ ಮುಂತಾದ ಚಿತ್ರಗಳ ಮೂಲಕ ತಮ್ಮದೇಆದ ಛಾಪನ್ನು ಮೂಡಿಸಿದ್ದಾರೆ.

ಶಿವರಾಜ್ ಕುಮಾರ್ ಕುಂ.ವೀರಭದ್ರಪ್ಪ ಅವರ ಮನಮೆಚ್ಚಿದ ಹುಡುಗಿ, ಶಿವರಾಮ ಕಾರಂತರ ಚಿಗುರಿದ ಕನಸು, ಗುಜರಾತಿ ಪನ್ನಲಾಲ್ ಪಟೇಲ್ ಅವರ ಜನುಮದ ಜೋಡಿ, ಬರಗೂರು ರಾಮಚಂದ್ರಪ್ಪ ಅವರ ಹಗಲುವೇಷ ಮುಂತಾದ ಕಾದಂಬರಿ ಆಧಾರಿತ ಚಿತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಬೃಹತ್ ಬಂಡವಾಳ ಹೊತ್ತು ಬರುವ ಹಿಂದಿ ಮತ್ತು ಇತರ ಭಾಷೆಗಳ ಚಿತ್ರಗಳ ಜೊತೆ ಕನ್ನಡ ಚಿತ್ರಗಳು ಸ್ಪರ್ಧಿಸಬೇಕಾದ ಇಂದಿನ ಸಂದರ್ಭದಲ್ಲಿ, ಶಿವರಾಜ್ ಕುಮಾರ್ ಅವರ ಜೋಗಿ ಚಿತ್ರವು ಬೆಂಗಳೂರಿನ 18 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಶತದಿನೋತ್ಸವ ಆಚರಿಸುವ ಮೂಲಕ ದಾಖಲೆ ನಿರ್ಮಿಸಿತು.
ನಿರಂತರವಾಗಿ ಸ್ಥಳೀಯ ಕಲಾವಿದರಿಗೆ, ನಿರ್ದೇಶಕರಿಗೆ ಹಾಗೂ ನಿರ್ಮಾಪಕರುಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶಿವರಾಜ್ ಕುಮಾರ್ ಅವರು, ರೀಮೇಕ್ ಚಿತ್ರಗಳಲ್ಲಿ ನಟಿಸಲು ಅವರು ನಿರಾಕರಿಸಿದ್ದು ಗಮನಾರ್ಹವಾಗಿದೆ. ಚಿತ್ರರಂಗದಲ್ಲಿನ ಇವರ ಸಾಧನೆಯನ್ನು ಗುರುತಿಸಿ ಹಲವು ಬಾರಿ ರಾಜ್ಯ ಪಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ, ಸುಬ್ಬಯ್ಯನಾಯ್ಡು ಪ್ರಶಸ್ತಿ ಹಾಗೂ ಇನ್ನೂ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ. ಇವರ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications