ಬಳ್ಳಾರಿಯಲ್ಲಿ ಏ.11, 12ರಂದು ಎಚ್ಡಿಕೆ ಚುನಾವಣಾ ಪ್ರಚಾರ

Posted By: GM Rohini
Subscribe to Oneindia Kannada

ಬಳ್ಳಾರಿ, ಏಪ್ರಿಲ್ 10 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಳ್ಳಾರಿ ಜಿಲ್ಲೆಯ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳು ಘೋಷಣೆಯಾಗಬೇಕಿದ್ದು, ಜಿಲ್ಲಾ ನಾಯಕರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.

ಕೃಷ್ಣ ಜೆಡಿಎಸ್‌ಗೆ ಬಂದರೆ ಸ್ವಾಗತ: ಎಚ್‌.ಡಿ. ಕುಮಾರಸ್ವಾಮಿ

ಬುಧವಾರ ಏಪ್ರಿಲ್ 11 ರಂದು ಬಳ್ಳಾರಿ ಜಿಲ್ಲಾ ಪ್ರವಾಸವನ್ನು ಕುಮಾರಸ್ವಾಮಿ ಕೈಗೊಂಡಿದ್ದಾರೆ. ಕೂಡ್ಲಿಗಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಬಳ್ಳಾರಿ ನಗರ, ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಘೋಷಣೆಗಾಗಿ ಬಳ್ಳಾರಿಗೆ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಇದೇ ಸಮಯದಲ್ಲಿ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Kumaraswamy to campaign in Ballari on April 11 and 12

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರು ಈ ಕುರಿತು ಮಾಹಿತಿ ನೀಡಿದ್ದಾರೆ. ಬೆಳಗ್ಗೆ ಖಾನಾಹೊಸಹಳ್ಳಿ, ಮಧ್ಯಾಹ್ನ ಹಗರಿಬೊಮ್ಮನಹಳ್ಳಿ ಮತ್ತು ಬಳ್ಳಾರಿಯಲ್ಲಿ ಸಂಜೆ ಸಾರ್ವಜನಿಕ ಸಭೆಯನ್ನು ಕುಮಾರಸ್ವಾಮಿ ನಡೆಸಲಿದ್ದಾರೆ.

ಓದುಗರ ಪತ್ರ: ಅಧಿಕಾರದ ಆಸೆಗೆ ಮಹಿಳೆಯ ತೇಜೋವಧೆ ಮಾಡಿದ ಎಚ್ಡಿಕೆ

ಬಳ್ಳಾರಿ ನಗರಕ್ಕೆ ಮೊಹಮ್ಮದ್ ಇಕ್ಬಾಲ್, ಸಿರುಗುಪ್ಪ ಕ್ಷೇತ್ರಕ್ಕೆ ಬಿಜೆಪಿ ಬಿಟ್ಟು ಬರುತ್ತಿರುವ ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ ಅವರ ಹೆಸರು ಘೋಷಣೆ ಆಗುವ ಸಾಧ್ಯತೆಗಳಿವೆ.

ಬುಧವಾರ ಬಳ್ಳಾರಿಯಲ್ಲಿಯೇ ವಾಸ್ತವ್ಯ ಹೂಡುವ ಕುಮಾರಸ್ವಾಮಿ ಅವರು ಏಪ್ರಿಲ್ 12 ರಂದು ಪತ್ರಿಕಾಗೋಷ್ಟಿ ನಡೆಸಿ, ಜಿಲ್ಲೆಯ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former Chief Minister and JD(S) state president H.D. Kumaraswamy will campaign for Karnataka assembly elections 2018 in Ballari district on April 11 and 12, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ