ಬಿ.ಶ್ರೀರಾಮುಲು ವಿರುದ್ಧ ಜಾಮೀನು ರಹಿತ ವಾರೆಂಟ್

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 04 : ಬಿಜೆಪಿ ಮುಖಂಡ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿಯಾಗಿರುವ ಶ್ರೀರಾಮುಲು ಅವರು ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದರಿಂದ ವಾರೆಂಟ್ ಜಾರಿಯಾಗಿದೆ.

ಬೆಂಗಳೂರಿನ 13ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಶ್ರೀರಾಮುಲು ಅವರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದೆ. ಮಾರ್ಚ್ 22ರಂದು ಶ್ರೀರಾಮುಲು ಅವರನ್ನು ಕೋರ್ಟ್‌ಗೆ ಹಾಜರುಪಡಿಸಿ ಎಂದು ನ್ಯಾಯಾಧೀಶೆ ಸಿ.ಜೆ.ವಿಶಾಲಾಕ್ಷಿ ಅವರು ಪೊಲೀಸರಿಗೆ ಆದೇಶಿಸಿದ್ದಾರೆ. [ಶ್ರೀರಾಮುಲು ವಿರುದ್ಧ ಸರ್ಚ್ ವಾರೆಂಟ್]

sriramulu

ಎಲ್.ಸೋಮಣ್ಣ ಎಂಬುವವರು 2014ರಲ್ಲಿ ಶ್ರೀರಾಮುಲು ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಶ್ರೀರಾಮುಲು ಅವರು ನಿರಂತರವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. [ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಜೈ ಎಂದ ಮತದಾರ]

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪರಮಾಪ್ತರಾದ ಬಿ.ಶ್ರೀರಾಮುಲು ಅವರು ಬಿಜೆಪಿ ತೊರೆದು ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪನೆ ಮಾಡಿದ್ದರು. 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪುನಃ ಬಿಜೆಪಿ ಸೇರಿದ್ದರು. ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 85,144 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru 13th Additional Chief Metropolitan Magistrate court on Friday, March 4, 2016 issued a non-bailable warrant against Ballari BJP MP B.Sriramulu in cheque bounce case.
Please Wait while comments are loading...