ಬೆಳ್ಳಂಬೆಳಗ್ಗೆ ಬಳ್ಳಾರಿ, ಗದಗನಲ್ಲಿ ಭ್ರಷ್ಟಾಚಾರ ನಿಗ್ರಹದಳ ದಾಳಿ

Posted By:
Subscribe to Oneindia Kannada

ಬಳ್ಳಾರಿ, ಜನವರಿ 04 : ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ಇಂದು (ಜನವರಿ 4) ಬೆಳ್ಳಂಬೆಳಗ್ಗೆ ಬಳ್ಳಾರಿಮತ್ತು ಗದಗ ಜಿಲ್ಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ.

ಎಸಿಬಿ ಬಲೆಗೆ ಹಳಿಯಾಳ ನೀರಾವರಿ ಇಲಾಖೆಯ ಲ್ಯಾಬ್ ಅಸಿಸ್ಟೆಂಟ್ ಹುಲಿ

ಬಳ್ಳಾರಿಯ ಉಪ ವಿಭಾಗಾಧಿಕಾರಿ ಶಿವಕುಮಾರ್ ಮತ್ತು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಅಶೋಕ್ ಪಾಟೀಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಸಂಪತ್ತುಗಳಿಸಿರುವ ದೂರಿನ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ.

The Anti corruption bureau ride in Bellary today

ಎಸಿಬಿ ಡಿ.ಎಸ್.ಪಿ. ಮಂಜುನಾಥ್ ಅವರ ನೇತೃತ್ವದಲ್ಲಿ ಬಳ್ಳಾರಿ ಮತ್ತು ಚಿತ್ರದುರ್ಗದ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಪರಿಶೀಲನೆ ಕಾರ್ಯ ಮುಂದುವರೆದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The anti-corruption bureau (ACB) ride in Bellary and Gadag on January 4th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ