1 ಟ್ರಿಲಿಯನ್ ಡಾಲರ್ ಗುರಿ; ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ, ಏನೆಲ್ಲಾ ಇರಲಿದೆ ?
Karnataka's new industrial policy: ಕರ್ನಾಟಕವು ದೇಶದಲ್ಲೇ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಾಗೂ ದೇಶದ ಪ್ರಮುಖ ಮತ್ತು ಶ್ರೀಮಂತ ರಾಜ್ಯಗಳಲ್ಲೂ ಕರ್ನಾಟಕ ಒಂದಾಗಿದೆ. ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರವು ವಿವಿಧ ಪ್ಲಾನ್‌ಗಳನ್ನು ಮಾಡಿಕೊಳ್ಳುತ್ತಿದೆ. ಇದೀಗ ಕರ್ನಾಟಕ ಸರ್ಕಾರವು 1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ನೀತಿಯ ಪರಿಶೀಲನೆಗೆ ಮುಂದಾಗಿದೆ.
ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವ ಬದ್ಧತೆಯೊಂದಿಗೆ ಸರ್ಕಾರ ಕೆಲಸ ಮಾಡುತ್ತಿರುವುದಾಗಿ ಸಚಿವ ಎಂ.ಬಿ ಪಾಟೀಲ ಅವರು ಹೇಳಿದ್ದಾರೆ. ಈ ಗುರಿ ಸಾಧಿಸುವ ನಿಟ್ಟಿನಲ್ಲಿ ಸಹಕಾರಿಯಾಗುವಂತೆ ಕೈಗಾರಿಕಾ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನೂತನ ಕೈಗಾರಿಕಾ ನೀತಿಯ ಕುರಿತು ಪರಿಶೀಲನೆ ನಡೆಸಲಾಗಿದೆ. ಕರ್ನಾಟಕದ ಮಟ್ಟಿಗೆ ಇದು ಮಹತ್ವದ ಬೆಳವಣಿಗೆಯಾಗಿದೆ.

ಉದ್ಯಮಗಳ ಬೇಡಿಕೆಗಳಿಗೆ ಸ್ಪಂದಿಸುವಂತೆ, ತಂತ್ರಜ್ಞಾನ ಅಳವಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ಮಾನವ ಸಂಪನ್ಮೂಲದ ಉತ್ತಮ ಬಳಕೆಗೆ ಒತ್ತು ನೀಡುವಂತಹ ನೀತಿಗಳನ್ನು ಇದರಲ್ಲಿ ಅಂದರೆ ಹೊಸ ನೀತಿಯಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಈ ದಿಟ್ಟ ಕ್ರಮಗಳು ರಾಜ್ಯದ ಆರ್ಥಿಕತೆಗೆ ಹೊಸ ಶಕ್ತಿ ತುಂಬಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಅಂದರೆ, 85 ಲಕ್ಷ ಕೋಟಿ ರೂಪಾಯಿ ಆರ್ಥಿಕ ಶಕ್ತಿಯನ್ನಾಗಿ ಬೆಳೆಸಲು ಸರ್ಕಾರ ಮುಂದಾಗಿದೆ. ಉದ್ಯಮ ಪರಿಣತರಿಂದ ಅಭಿಪ್ರಾಯ ಸಂಗ್ರಹಿಸಿ 2025-30ರ ವೇಳೆಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸುವುದು ಇದರ ಉದ್ದೇಶವಾಗಿದೆ. ಕರ್ನಾಟಕಕ್ಕೆ ಈಗಾಗಲೇ ದಕ್ಷಿಣ ಭಾರತದಲ್ಲಿ ವಿವಿಧ ರಾಜ್ಯಗಳು ಪೈಪೋಟಿ ನೀಡುತ್ತಿವೆ. ಈ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈ ಹೊಸ ಕೈಗಾರಿಕಾ ನೀತಿಯು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೈಗಾರಿಕೆ ನೀತಿಯನ್ನು ಅವಶ್ಯವಿರುವಂತೆ (ಕೈಗಾರಿಕಾ ನೀತಿಯಂತೆ) ತಿದ್ದುಪಡಿಗೆ ಅವಶ್ಯವಿರುವಂತೆ ನೀತಿ ರೂಪಿಸಲು ಮುಂದಾಗಿದೆ. ಈ ಸಂಬಂಧ ಎಲ್ಲಾ ವಲಯಗಳ ಉದ್ದಿಮೆದಾರರು ನೀತಿ ರೂಪಿಸುವುದಕ್ಕೆ ಅಭಿಪ್ರಾಯ ಹಾಗೂ ಸಹಕಾರ ನೀಡಬೇಕು. ಈ ಬಗ್ಗೆ ಎಲ್ಲರೊಂದಿಗೂ ಚರ್ಚೆ ಮಾಡಿಯೇ ಮುಂದುವರಿಯುವುದಾಗಿ ಈಚೆಗೆ ಸಚಿವರು ಹೇಳಿದ್ದರು.
ಈ ಕ್ಷೇತ್ರಗಳಲ್ಲಿ ಆದ್ಯತೆ: ಕರ್ನಾಟಕವನ್ನು 85 ಲಕ್ಷ ಕೋಟಿ ರೂಪಾಯಿ ಆರ್ಥಿಕ ಶಕ್ತಿಯನ್ನಾಗಿ ಬೆಳೆಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರವು ಕಾರ್ಯಪ್ರವತ್ತವಾಗಿದ್ದು, ಹೊಸ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದೆ. ಇದರ ಭಾಗವಾಗಿ ಕರ್ನಾಟಕದಲ್ಲಿ ಮೂಲಸೌಕರ್ಯ, ಕೌಶಲಾಭಿವೃದ್ಧಿ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಲ್ಲಿ ಇರುವ ಕೆಲವು ಕೊರತೆಗಳು ಬಗೆಹರಿಸುವ ನಿಟ್ಟಿನಲ್ಲೂ ಪ್ಲಾನ್ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
1ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ ಸಾಧಿಸುವತ್ತ ಕೈಗಾರಿಕಾ ನೀತಿಯ ಪರಿಶೀಲನೆ!
— M B Patil (@MBPatil) November 4, 2024
ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವ ಬದ್ಧತೆಯೊಂದಿಗೆ ನಮ್ಮ ಸರಕಾರ ಕಾರ್ಯನಿರ್ವಹಿಸುತ್ತಿದ್ದು, ಈ ಗುರಿ ಸಾಧಿಸಲು ಸಹಕಾರಿಯಾಗುವಂತೆ ಈದಿನ ಕೈಗಾರಿಕಾ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನೂತನ ಕೈಗಾರಿಕಾ ನೀತಿಯ ಕುರಿತು… pic.twitter.com/rhFAX5Ndio
ಕರ್ನಾಟಕಕ್ಕೆ ಪೈಪೋಟಿ: ಇನ್ನು ಇತ್ತೀಚಿನ ದಿನಗಳಲ್ಲಿ ಕರ್ನಾಟಕಕ್ಕೆ ಪೈಪೋಟಿ ನೀಡುವುದು ಹೆಚ್ಚಾಗುತ್ತಿದೆ. ಕರ್ನಾಟಕಕ್ಕೆ ಉತ್ತರ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ಪೈಪೋಟಿ ಇದೆ. ಉದಾ: ಬೆಂಗಳೂರಲ್ಲಿ ನೀರಿನ ಸಮಸ್ಯೆ ಎದುರಾದಾಗ ಇಲ್ಲವೇ ಧಾರಾಕಾರ ಮಳೆ ಸುರಿದು ಸಮಸ್ಯೆ ಆದ ಸಂದರ್ಭದಲ್ಲಿ ಹೊರ ರಾಜ್ಯದ ಸರ್ಕಾರದ ಮಂತ್ರಿಗಳು ನಮ್ಮ ರಾಜ್ಯಕ್ಕೆ ಬನ್ನಿ ಎಂದು ಉದ್ಯಮಿಗಳನ್ನು ಬಹಿರಂಗವಾಗಿಯೇ ಆಹ್ವಾನಿಸಿದ್ದಾರೆ.
ಅಲ್ಲದೇ ಕೆಲವು ತಪ್ಪು ಅಥವಾ ಹೊಂದಾಣಿಕೆ ಕೊರತೆಯಿಂದ ಉದ್ಯಮಗಳು ಬೇರೆ ರಾಜ್ಯದ ಕಡೆ ಮುಖ ಮಾಡಿರುವುದು ಸಹ ಇದೆ. ಇದೀಗ ಸರ್ಕಾರ ಹೊಸ ನೀತಿಯಿಂದ ಇದಕ್ಕೆಲ್ಲ ಬ್ರೇಕ್ ಬೀಳಲಿದೆ.












Click it and Unblock the Notifications