Brand Bengaluru: ಸಲ್ಲಿಕೆಯಾದ 10000 ಹೆಚ್ಚು ಸಲಹೆ ವಿಂಗಡಿಸಿ ಶೀಘ್ರವೇ ವರದಿ ಸಲ್ಲಿಕೆ
ಬೆಂಗಳೂರು, ಆಗಸ್ಟ್ 03: ರಾಜ್ಯ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕಾಗಿ ಸಾರ್ವಜನಿಕರಿಂದ ಬಿಬಿಎಂಪಿಗೆ ಬರೊಬ್ಬರಿ 10,479 ಸಲಹೆಗಳು ಸಲ್ಲಿಕೆಯಾಗಿವೆ. ಹಾಗಾದರೆ ಜನರು ಉತ್ತಮ ಬೆಂಗಳೂರಿಗೆ ಏನೇನು ಬಯಸಿದ್ದಾರೆ. ಅವುಗಳ ಅನುಷ್ಠಾನಕ್ಕೆ ಬಿಬಿಎಂಪಿ ಚಿಂತನೆ, ವರದಿ ಕುರಿತು ಮಾಹಿತಿ ಇಲ್ಲಿ ತಿಳಿಯಿರಿ.
ಬ್ರ್ಯಾಂಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಗಳಲ್ಲಿ ಸಾರ್ವಜನಿಕರಿಂದ ಸಲಹೆಗಳು ಸಲ್ಲಿಕೆಯಾಗಿವೆ. ಒಟ್ಟು 10,479 ಸಲಹೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಪರಿಸರ ವಿಜ್ಞಾನ ವಿಭಾಗದದಿಂದ ಬಂದಿರುವಂತಹ ಎಲ್ಲ ಸಲಹೆಗಳನ್ನು ಬೇರ್ಪಡಿಸಿ ವರದಿ ಸಿದ್ದಪಡಿಸಲಿದೆ. ಅದರ ಆಧಾರದಲ್ಲಿ ವೈಜ್ಞಾನಿಕವಾಗಿ ಯೋಜನೆ ರೂಪಿಸಿ ಜಾರಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಲಿದೆ.

ಈ ಕುರಿತು ಗುರುವಾರ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ವಿಚಾರ ಸಂಕಿರಣ ನಡೆಯಿತು. ಈ ವೇಳೆ ಮಾತನಾಟಡಿದ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಅವರು, ನಾಗರಿಕರ ಸಲಹೆಗಳನ್ನು ಕ್ರೂಢೀಕರಿಸಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಆದಷ್ಟು ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಕೆ
ಬೆಂಗಳೂರು ವಿವಿಯ ರಿಜಿಸ್ಟರ್ ಶೇಖ್ ಲತೀಫ್ ಮಾತನಾಡಿ, ಬ್ರ್ಯಾಂಡ್ ಬೆಂಗಳೂರು ಯೋಜನೆ ಸ್ವಚ್ಛ ಬೆಂಗಳೂರು ವಿಭಾಗಕ್ಕೆ ಬೆಂಗಳೂರು ವಿಶ್ವವಿದ್ಯಾಲಯವನ್ನು ಶೈಕ್ಷಣಿಕ ಪಾಲುದಾರರನ್ನಾಗಿ ಮಾಡಲಾಗಿದೆ. ನಾವು ಮೊದಲು ಸಲಹೆಗಳನ್ನು ಯೋಜನೆಗಳಾಗಿ ರೂಪಿಸಲು ವಿಂಗಡಣೆ ಮಾಡಲಿದ್ದೇವೆ. ನಂತರ ವರದಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಘನತ್ಯಾಯ ನಿರ್ವಹಣೆ ಪ್ರಕ್ರಿಯೆ ಪಾಲಿಕೆಯ ಕರ್ತವ್ಯ ಮಾತ್ರವಲ್ಲ, ನಗರದಲ್ಲಿರುವ ಎಲ್ಲಾ ವರ್ಗ/ನಾಗರಿಕರ ಕರ್ತವ್ಯವಾಗಿದೆ. ಎಲ್ಲರೂ ತಮ್ಮ-ತಮ್ಮ ಜವಾಬ್ದಾರಿಗಳನ್ನು ಅರಿತು ಮೂಲದಲ್ಲಿಯೇ ಸ್ವಚ್ಛತೆ ಕಾಪಾಡಿದರೆ ಸ್ವಚ್ಛ ಬೆಂಗಳೂರನ್ನಾಗಿಸಲು ಸಾಧ್ಯ.
ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ರಸ್ತೆ ಬದಿ, ಖಾಲಿ ಜಾಗದಲ್ಲಿ ಬಿಸಾಡುವ ಸಂಖ್ಯೆ ಹೆಚ್ಚಿದೆ. ಅದನ್ನು ಪಾಲಿಕೆ ವತಿಯಿಂದ ಸ್ವಚ್ಛ ಮಾಡುತ್ತಾರೆ. ರಸ್ತೆಬದಿ ತ್ಯಾಜ್ಯ ಬಿಸಾಡುವುದನ್ನು ಬಿಡಬೇಕು. ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುಬೇಕಿದೆ ಎಂದು ಹೇಳಿದರು.
ಬಂದ ಸಲಹೆಗಳ ಪಟ್ಟಿ ಹೀಗಿವೆ
• ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದು.
• ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಕೇಂದ್ರಿಕರಣ ಮಾಡಿ ವಿಲೇವಾರಿ ಮಾಡುವುದು.
• ಡೋರ್ ಟು ಡೋರ್ 100% ತ್ಯಾಜ್ಯ ವಿಂಗಡಣೆ ಮಾಡುವ ಸಲುವಾಗಿ ಲಿಂಕ್ ವರ್ಕರ್ಸ್ ಗಳನ್ನು ಸರಿಯಾಗಿ ಬಳಸಿಕೊಳ್ಳುವುದು.
• ಪ್ರತಿ ವಲಯದಲ್ಲೂ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪಿಸಿ ಮೇಲ್ವಿಚಾರಣೆ ಮಾಡಬೇಕು.
• ನಗರದ ಎಲ್ಲಾ ಮನೆಗಳಲ್ಲೂ ತ್ಯಾಜ್ಯ ಸಂಸ್ಕರಣೆ ಮಾಡುವ ಪದ್ಧತಿ ಜಾರಿಯಾಗೊಳಿಸಬೇಕು.
• ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳು ಪ್ರತಿ ವಾರ್ಡ್ ನಲ್ಲೂ ತೆರೆಯುವುದು.
• ವೇಸ್ಟ್ ಟು ಎನರ್ಜಿ ಘಟಕವನ್ನು ಸ್ಥಾಪಿಸುವುದು.
• ಬಯೋ ಸಿ.ಎನ್.ಜಿ ಸ್ಥಾಪಿಸುವುದು.
• ಆಟೋ ಟಿಪ್ಪರ್ ಗಳ ಮೇಲೆ ಸರಿಯಾಗಿ ನಿಗಾವಹಿಸಿ ಮೇಲ್ವಿಚಾರಣೆ ನಡೆಸುವುದು. ಎಲ್ಲಾ ಆಟೋ ಟಿಪ್ಪರ್ ಗಳಿಗೂ ಜಿಪಿಎಸ್ ಅಳವಡಿಸುವುದು.
• ಘನತ್ಯಾಜ್ಯ ನಿರ್ವಹಣೆ ಬಗ್ಗೆ ಯುವಕರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು.
• ನಗರದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸುವುದು.
• ಮೈಕ್ರೋ ಪ್ಲಾನ್ 2016 ರಲ್ಲಿ ಮಾಡಿದ್ದು ಹಳೆಯದಾಗಿದೆ. ಕಳೆದ 8 ವರ್ಷಗಳಿಂದ ಕುಟುಂಬಗಳ ಸಂಖ್ಯೆ ಹೆಚ್ಚಿರುವುದರಿಂದ ಅದನ್ನು ಪರಿಷ್ಕರಿಸಬೇಕು.
• ಸಿ & ಡಿ ವೇಸ್ಟ್ ಸಂಗ್ರಹಿಸುವ ಪ್ರಕ್ರಿಯೆ ಸಮರ್ಪಕವಾಗಿ ಜಾರಿಯಾಗಬೇಕು. OLA ರೀತಿಯಲ್ಲಿಯೇ ತಂತ್ರಾಂಶವನ್ನು ಸಿದ್ದಪಡಿಸಿಕೊಂಡು ವಾಹನಗಳನ್ನು ನೊಂದಾಯಿಸಿಕೊಂಡು ಮನೆಯಿಂದ ಸಿ & ಡಿ ತ್ಯಾಜ್ಯವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಬೇಕು.
• ತ್ಯಾಜ್ಯವನ್ನು ಸರಿಯಾದ ಮಾದರಿಯಲ್ಲಿ ವಿಂಗಡಣೆ ಮಾಡುವುದು.
• ಸ್ಮಾರ್ಟ್ ವೇಸ್ಟ್ ಮ್ಯಾನೇಜ್ಮೆಂಟ್ ವ್ಯವಸ್ಥೆ ಜಾರಿಗೊಳಿಸುವುದು.
• ಸಾರ್ವಜನಿಕ ಶೌಚಾಲಯಗಳು ಹೆಚ್ಚಿಸುವ ಜೊತೆಗೆ ಸರಿಯಾಗಿ ನಿರ್ವಹಣೆ ಮಾಡಬೇಕು.
• ಘನತ್ಯಾಜ್ಯ ನಿರ್ವಹಣೆಗೆ ಸರಿಯಾದ ಮೂಲಸೌಕರ್ಯದ ವ್ಯವಸ್ಥೆ ಮಾಡಬೇಕು.
• ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯ ಬಿನ್ ಗಳನ್ನು ಅಳವಡಿಸಿ, ಅದರಲ್ಲಿಯೇ ತ್ಯಾಜ್ಯವನ್ನು ಬಿಸಾಡುವ ಪದ್ದತಿಯನ್ನು ರೂಢಿಸಿಕೊಳ್ಳಬೇಕು.
• ಪುನರ್ ಬಳಕೆ ಮಾಡಬಹುದಾದ ವಸ್ತು/ಉತ್ಪನ್ನಗಳನ್ನು ಬಿಸಾಡದೆ ಸರಿಯಾದ ಅನುಕ್ರಮದಲ್ಲಿ ಪುನರ್ ಬಳಕೆ ಮಾಡುವ ವ್ಯವಸ್ಥೆ ಜಾರಿಗೊಳಿಸುವುದು.
• ಪ್ರಸ್ತುತ 1.40 ಕೋಟಿ ಜನಸಂಖ್ಯೆಗೆ ಕೇವಲ 15000 ಪೌರಕಾರ್ಮಿಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಅವಶ್ಯಕತೆಯ ಆಧಾರದ ಮೇಲೆ ಪೌರಕಾರ್ಮಿಕರನ್ನು ನೇಮಿಸುವುದು.
• ಸ್ವಚ್ಛ ಬೆಂಗಳೂರು ಅಡಿಯಲ್ಲಿ ಬ್ರಾಂಡ್ ಬೆಂಗಳೂರಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಪೌರಕಾರ್ಮಿಕರ ಪ್ರತಿನಿಧಿಯನ್ನು ಸೇರಿಸಿ
• ಅಪಾಯಕಾರಿ ಮತ್ತು ಪ್ರಾಣಿ ತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸಿ.
ಸಮಗ್ರ ಬದಲಾವಣೆಗೆ ಸರ್ಕಾರ ಸಜ್ಜು
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ಅವರು, ನಗರದಲ್ಲಿ ಘನತ್ಯಾಜ್ಯ ವಿಭಾಗದಲ್ಲಿ ಸಮಗ್ರ ಬದಲಾವಣೆಗಾಗಿ ಸಾಕಷ್ಟು ಕಾರ್ಯರೂಪಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಬೆಂಗಳೂರು ಕುರಿತಾಗಿ ವೆಬ್ ಸೈಟ್ ನಲ್ಲಿ ನಾಗರಿಕರಿಂದ ಸಲಹೆಗಳನ್ನು ಪಡೆಯಲಾಗಿದೆ.
ಬಂದ 10 ಸಾವಿರಕ್ಕೂ ಹೆಚ್ಚು ಸಲಹೆಗಳನ್ನೆಲ್ಲ ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನದ ವಿಭಾಗದಿಂದ ಕ್ರೋಢೀಕರಿಸಿ ಅಧ್ಯಯನ ನಡೆಸಿ ಬಂದಿರುವಂತಹ ಸಲಹೆಗಳನ್ನು ವಿಭಾಗಗಳಾಗಿ ಬೇರ್ಪಡಿಸಿ ಅಂತಿಮ ವರದಿ ಸಲ್ಲಿಸುತ್ತೇವೆ. ಅದರ ಆಧಾರದಲ್ಲಿ ವೈಜ್ಞಾನಿಕವಾಗಿ ಅಳವಡಿಸಿಕೊಳ್ಳಲು ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.
ನಗರದಲ್ಲಿ ಸುಮಾರು 1.4 ಕೋಟಿ ಲಕ್ಷ ಜನಸಂಖ್ಯೆ ಇದೆ. ನಿತ್ಯ 5,500 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿ ಆಗುತ್ತಿದೆ. ವೈಜ್ಞಾನಿಕವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡದಿದ್ದಲ್ಲಿ ಮುಂದಿನ 15 ವರ್ಷಗಳಲ್ಲಿ 12,000 ಮೆಟ್ರಿಕ್ ಟನ್ ಕಸ ಉತ್ಪಾದನೆ ಆಗಲಿದೆ. ಆಗ ಇನ್ನಷ್ಟು ಸಮಸ್ಯೆ ಉಂಟಾಗುವ ಸಂಭವವಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications