ರಾಜ್ಯದಲ್ಲಿ 10 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ

ಬೆಂಗಳೂರು, ಮೇ 11: ಕರ್ನಾಟಕದಲ್ಲಿಂದು ಹೊಸದಾಗಿ 10 ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ.

ಹತ್ತು ಹೊಸ ಪ್ರಕರಣಗಳ ಪೈಕಿ ಬಾಗಲಕೋಟೆ 2, ಬೀದರ್ 2, ದಾವಣಗೆರೆ 3. ಹಾವೇರಿ 1, ವಿಜಯಪುರ 1, ಕಲಬುರಗಿ 1 ಕೇಸ್ ದಾಖಲಾಗಿದೆ. ಇದುವರೆಗೂ 31 ಜನರು ಸೋಂಕಿನಿಂದ ಹೊರಬರದೇ ಸಾವನ್ನಪ್ಪಿದ್ದಾರೆ. 422 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಶಿಗ್ಗಾಂವ ತಾಲ್ಲೂಕಿನ ಅಂದಲಗಿ ಗ್ರಾಮದ ವ್ಯಕ್ತಿಗೆ ಸೋಂಕು ದೃಢವಾಗಿದೆ. ಈತ ಮುಂಬಯಿ ನಗರದಿಂದ ಆಗಮಿಸಿದ್ದ 26 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3ಕ್ಕೆ ಏರಿದೆ.

10 New Cases Of COVID19 Reported In Karnataka Today

ಕರ್ನಾಟಕದಲ್ಲಿ ಜಿಲ್ಲಾವಾರು ಅಂಕಿ ಅಂಶಗಳನ್ನು ನೋಡುವುದಾದರೆ 177 ಪ್ರಕರಣಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಬೆಳಗಾವಿ 113 ಕೇಸ್ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ. ಮೈಸೂರು 88 ಹೊಂದಿದ್ದು ಮೂರನೇ ಸ್ಥಾನದಲ್ಲಿದೆ. ಇಂದಿನ ವರದಿಯಲ್ಲಿ ಮೂರು ಪ್ರಮುಖ ಜಿಲ್ಲೆಗಳಲ್ಲಿ ಹೊಸ ಕೇಸ್ ದಾಖಲಾಗಿಲ್ಲ.

ಇಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಸಭೆ ನಿಗದಿಯಾಗಿದ್ದು, ಈ ಸಭೆಯ ಬಳಿಕ ರಾಜ್ಯದಲ್ಲಿ ಮತ್ತಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+