ಬೆಂಗಳೂರು; 100 ಹಾಸಿಗೆಯ ಕೋವಿಡ್ ಆಸ್ಪತ್ರೆ ಇಂದು ಉದ್ಘಾಟನೆ

ಬೆಂಗಳೂರು, ಮೇ 06; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತರು ಬೆಡ್‌ಗಳನ್ನು ಪಡೆಯಲು ಹರಸಾಹಸ ಪಡಬೇಕಿದೆ. ಜಾಲಹಳ್ಳಿಯಲ್ಲಿ ಇಂದು 100 ಹಾಸಿಗೆಯ ಆಸ್ಪತ್ರೆ ಉದ್ಘಾಟನೆಯಾಗುತ್ತಿದೆ.

ಜಾಲಹಳ್ಳಿಯ ಏರ್ ಫೋರ್ಸ್ ಸ್ಟೇಷನ್‌ನಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಸಾಮಾನ್ಯ ಜನರನ್ನು ಸಹ ಈ ಸೇನಾ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗುತ್ತದೆ. ಏರ್ ಫೋರ್ಸ್‌ನ ಕಮಾಂಡ್ ಆಸ್ಪತ್ರೆ ಸಿಬ್ಬಂದಿ ಇದರ ನಿರ್ವಹಣೆ ನೋಡಿಕೊಳ್ಳಲಿದ್ದಾರೆ.

hospital

ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಸೂಚಿಸುವ ಜನರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಬೆಡ್‌ಗಳು ಸಹ ಈ ಆಸ್ಪತ್ರೆಯಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನಲೆಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಏಪ್ರಿಲ್ 27ರಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಮೇ 12ರ ಬೆಳಗ್ಗೆ 6 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಲಾಕ್ ಡೌನ್ ಇದ್ದರೂ ರಾಜ್ಯದಲ್ಲಿ ಬುಧವಾರ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರದ ಗಡಿಯನ್ನು ದಾಟಿದೆ.

covid care

ಬುಧವಾರ ಕರ್ನಾಟಕದಲ್ಲಿ 50,112 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದೆ. ಇವುಗಳಲ್ಲಿ ಬೆಂಗಳೂರು ನಗರದಲ್ಲಿಯೇ 23,106 ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,13,314.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+