100 ಕೋಟಿ ರೂ. ಬೆಂಗಳೂರು ಅಭಿವೃದ್ಧಿಗೆ ಅನುದಾನ: ಡಿ.ಕೆ ಶಿವಕುಮಾರ್ ಘೋಷಣೆ!
ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಂಗಳೂರು ಕೇಂದ್ರಿತ ಅಭಿವೃದ್ಧಿಯನ್ನು ಮಾಡುತ್ತಿದೆ. ಬೆಂಗಳೂರು ಅಭಿವೃದ್ಧಿಗೆ ಮಾತ್ರ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಬೆಂಗಳೂರು ಹೊರತುಪಡಿಸಿ, ರಾಜ್ಯದ ಇನ್ನುಳಿದ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತಿಲ್ಲ ಎನ್ನುವ ಗಂಭೀರವಾದ ಆರೋಪ ಹಾಗೂ ಅಸಮಾಧಾನ ಕನ್ನಡಿಗರಿಂದ ಕೇಳಿ ಬರುತ್ತಿದೆ. ಈ ರೀತಿ ಇರುವಾಗಲೇ ಬೆಂಗಳೂರಿನ ಅಭಿವೃದ್ಧಿಗೆ ಬರೋಬ್ಬರಿ 100 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಆದರೆ, ಇದು ಪ್ರಮುಖ ಕಾಮಗಾರಿಗೆ ಅಲ್ಲ ಎನ್ನುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನ ಅಭಿವೃದ್ಧಿ ಹೆಸರಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೋಟ್ಯಾಂತರ ರೂಪಾಯಿ ಅನುದಾನವನ್ನು ಮೀಸಲಿರಿಸುತ್ತಿದೆ. ಆದರೆ, ಕರ್ನಾಟಕ ಪ್ರಮುಖ ನಗರಗಳನ್ನು ಎರಡನೇ ಹಾಗೂ ಮೂರನೇ ಹಂತದ ನಗರಗಳ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ. ಅಲ್ಲದೇ ರಾಜ್ಯದ ಮತ್ತೊಂದು ಹಾಗೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪ ಅಥವಾ ಬೆಂಗಳೂರಿನ ಪಕ್ಕದಲ್ಲಿರುವ ಜಿಲ್ಲೆಗಳಲ್ಲೇ ನಿರ್ಮಾಣ ಮಾಡಲು ಮುಂದಾಗಿದೆ. ಈ ಮೂಲಕ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಸೌಂದರ್ಯೀಕರಣ ಹೆಸರಿನಲ್ಲಿ ಬರೋಬ್ಬರಿ 100 ಕೋಟಿ ವೆಚ್ಚ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ರೀತಿ ಸೌಂದರ್ಯೀಕರಣ ಮತ್ತು ಜಂಕ್ಷನ್‌ಗಳ ಅಭಿವೃದ್ಧಿಗೆ ವೆಚ್ಚ ಮಾಡುವ ಬದಲು ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಪಡಿಸಿ ಎಂದು ಹಲವರು ಆಗ್ರಹಿಸಿದ್ದಾರೆ.
ಡಿ.ಕೆ ಶಿವಕುಮಾರ್ ಟ್ವೀಟ್‌ನಲ್ಲಿ ಏನಿದೆ ?
ಇನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರು, ಅಭಿವೃದ್ಧಿಯ ಪಥದಲ್ಲಿ ನಮ್ಮ ಬೆಂಗಳೂರು ಎನ್ನುವ ಶೀರ್ಷಿಕೆಯೊಂದಿಗೆ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಬೆಂಗಳೂರು ನಗರದ ಸಂಚಾರವನ್ನು ಸುಗಮಗೊಳಿಸಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ, ನಗರದ ಪ್ರಮುಖ 75 ಜಂಕ್ಷನ್‌ಗಳ ಅಭಿವೃದ್ಧಿಗಾಗಿ ₹100 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈಗಾಗಲೇ ಶೇ. 40ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುವುದು ಮತ್ತು ಉತ್ತಮ ಮೂಲಸೌಕರ್ಯ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿಗೆ ನೂರು ಕೋಟಿ ರೂಪಾಯಿ
ಸುರಕ್ಷಾ 75 ಅಡಿ ಬೆಂಗಳೂರಿನ 75 ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿಗೆ ಯೋಜನೆ. 75 ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಮೀಸಲು. ಇಲ್ಲಿಯ ವರೆಗೆ ಜಂಕ್ಷನ್‌ಗಳ ಶೇ. 40% ಕಾಮಗಾರಿ ಮುಕ್ತಾಯವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ!
ಇನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಈ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.












Click it and Unblock the Notifications