ಬೆಂಗಳೂರು; 105 ವರ್ಷದ ಕೋವಿಡ್ ಸೋಂಕಿತ ರೋಗಿ ಸಾವು

ಬೆಂಗಳೂರು, ಜುಲೈ 26 : ಕರ್ನಾಟಕದ ಹಿರಿಯ ಕೊರೊನಾ ವೈರಸ್ ಸೋಂಕಿತ ರೋಗಿಯಾಗಿದ್ದ 105 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಜೂನ್ 20ರಂದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Recommended Video

      EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

      ಬಸವೇಶ್ವರ ನಗರದ ನಿವಾಸಿಯಾದ 105 ವರ್ಷದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಮೊದಲು ಯಾವುದೇ ಉಸಿರಾಟದ ತೊಂದರೆ ಅವರಿಗೆ ಇರಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.

      ಅವರ ರಕ್ತದೊತ್ತಡ ಕಡಿಮೆಯಾಗಿ ಉಸಿರಾಟದ ತೊಂದರೆ ಆರಂಭವಾಯಿತು. ಆಗ ಅವರನ್ನು ಐಸಿಯುಗೆ ಸ್ಥಳಾಂತರ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಲಾಯಿತು. ಶುಕ್ರವಾರ ಮುಂಜಾನೆ ತನಕ ಅವರಿಗೆ ಆಕ್ಸಿಜನ್ ನೀಡಲಾಗುತ್ತಿತ್ತು. ಬಳಿಕ ವೆಂಟಿಲೇಟರ್ ಅಳವಡಿಕೆ ಮಾಡಲಾಗಿತ್ತು.

      105 Age Karnatakas Oldest COVID 19 Patient Dies

      "ಶ್ವಾಸಕೋಶಕ್ಕೆ ಸೋಂಕು ತಗುಲಿದ್ದ ಕಾರಣ ಉಸಿರಾಟದ ತೊಂದರೆಯಿಂದಾಗಿ ಅವರು ಮೃತಪಟ್ಟರು" ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಶನಿವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟವರು.

      ಸರ್ಕಾರಿ ಲೆಕ್ಕಾಧಿಕಾರಿಯಾಗಿದ್ದ ರೋಗಿ 1973ರಲ್ಲಿ ನಿವೃತ್ತಿ ಹೊಂದಿದ್ದರು. ಕರ್ನಾಟಕದಲ್ಲಿ ಇವರೇ ಇದುವರೆಗಿನ ಹಿರಿಯ ಕೊರೊನಾ ವೈರಸ್ ಸೋಂಕಿತ ರೋಗಿಯಾಗಿದ್ದರು. ಕೇಂದ್ರ ಆರೋಗ್ಯ ಸಚಿವಾಲಯ ನೀಡುವ ಮಾಹಿತಿಯಂತೆ ದೇಶದಲ್ಲಿ ಕೋವಿಡ್‌ನಿಂದ ಸಾವನ್ನಪ್ಪುವವರ ವಯೋಮಿತಿ 60 ರಿಂದ 74.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+