Hyderabad- Bengaluru Bus Accident: ಹೈದರಾಬಾದ್ - ಬೆಂಗಳೂರು ಬಸ್‌ನಲ್ಲಿದ್ದ 25 ಜನ ಸಜೀವ ದಹನ!

Hyderabad-Bengaluru Bus: ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 25 ಜನ ಮೃತಪಟ್ಟಿದ್ದಾರೆ. ಈ ಬಸ್‌ನಲ್ಲಿ ಒಟ್ಟು 40 ಜನ ಪ್ರಯಾಣಿಕರಿದ್ದರು, ಭೀಕರ ಅಗ್ನಿ ಅವಘಡದಲ್ಲಿ ಇನ್ನೂ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೈದರಾಬಾದ್ ನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು. ಬಸ್ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಮುಂಜಾನೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ ಬೂದಿಯಾಗಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 40 ಜನ ಪ್ರಯಾಣಿಕರಿದ್ದರು, ಬೆಂಕಿ ಅವಘಡದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

11 Burnt Alive Hyderabad-Bengaluru Bus Turns Into Inferno on Andhra Pradesh Highway

ಮುಂಜಾನೆ 3 ಗಂಟೆ ಸುಮಾರಿಗೆ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಹೈದರಾಬಾದ್ ನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಈ ಬಸ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಸ್‌ನ ಕೆಳಗೆ ಸಿಲುಕಿಕೊಂಡಿತ್ತು. ಈ ವೇಳೆ ಸೃಷ್ಟಿಯಾದ ಕಿಡಿಯಿಂದಾಗಿ ಏಕಾಏಕಿ ಬೆಂಕಿ ಹೊತ್ತುಕೊಂಡಿದೆ. ಎಂದು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ತಿಳಿಸಿದ್ದಾರೆ.

ಇದು ಎಸಿ ಬಸ್ ಆಗಿರುವುದರಿಂದ, ಪ್ರಯಾಣಿಕರು ಕಿಟಕಿಗಳನ್ನು ಒಡೆದು ಹೊರಗೆ ಎತ್ತುಕೊಂಡು ಬರಬೇಕಾಯಿತು. ಗಾಜು ಒಡೆದು ಕೆಲವರು ಹೊರ ಬಂದಿದ್ದಾರೆ. ಪ್ರಯಾಣಿಕರ ಪಟ್ಟಿಯ ಪ್ರಕಾರ, ಇಬ್ಬರು ಚಾಲಕರು ಸೇರಿದಂತೆ ಒಟ್ಟು 40 ಜನ ಆ ಬಸ್‌ನಲ್ಲಿದ್ದರು ಎನ್ನಲಾಗಿದೆ.

ಇನ್ನು ಈ ದುರಂತದಲ್ಲಿ ಗಾಯಗೊಂಡ 15 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಲಾಗಿದೆ ಎಂದು ಆಂಧ್ರ ಪ್ರದೇಶದ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಏಕಾಏಕಿ ಬಸ್‌ಗೆ ಬೆಂಕಿ ಹೊತ್ತು ಉರಿಯುವಾಗ ಜನ ಚೀರಾಡುತ್ತಿರುವ ಹೃದಯ ವಿದ್ರಾವಕ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಡಿ.ಕೆ ಶಿವಕುಮಾರ್ ಸೇರಿ ಹಲವರಿಂದ ಸಂತಾಪ: ಹೈದರಾಬಾದ್ - ಬೆಂಗಳೂರು ಬಸ್‌ ದುರಂತಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಸಂಸದ ಡಾ.ಕೆ ಸುಧಾಕರ್ ಅವರು, ಕರ್ನೂಲ್ ಜಿಲ್ಲೆಯ ಚಿನ್ನ ಟೆಕೂರು ಬಳಿ ಹೈದರಾಬಾದ್‌ನಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ ಹಲವು ಅಮೂಲ್ಯ ಜೀವಗಳನ್ನು ನಾವು ಕಳೆದುಕೊಂಡಿದ್ದೇವೆ. ಭೀಕರ ಬಸ್ ಬೆಂಕಿ ಅವಘಡದಿಂದ ತೀವ್ರ ಆಘಾತ ಉಂಟಾಗಿದೆ.

ಈ ಅಸಹನೀಯ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ನೀಡಬೇಕು ಹಾಗೂ ಮೃತಪಟ್ಟವರನ್ನು ಗುರುತಿಸುವಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡಬೇಕೆಂದು ನಾನು ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತಪಟ್ಟವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಸಂಕಷ್ಟ ದಲ್ಲಿರುವವರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿ ಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+