ರಾಜ್ಯದಲ್ಲಿ 11 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು, ಏಪ್ರಿಲ್ 12: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಈ ಕಡೆ ಕರ್ನಾಟಕದಲ್ಲಿ ಇಂದು ಹೊಸದಾಗಿ 11 ಕೊವಿಡ್ ಕೇಸ್ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.

ಈ ಕುರಿತು ಸರ್ಕಾರದಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದ್ದು, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಹನ್ನೊಂದು ಪ್ರಕರಣಗಳ ಪೈಕಿ ಬೆಂಗಳೂರು 4, ಬೆಳಗಾವಿ 4, ಮೈಸೂರು 1, ಕಲಬುರಗಿ 1 ಹಾಗೂ ವಿಜಯಪುರದಲ್ಲಿ 1 ಕೇಸ್ ದೃಢವಾಗಿದೆ.

ವಿದೇಶಿ ವ್ಯಕ್ತಿಗಳು ಹಾಗೂ ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿ ಇಲ್ಲದೇ ಇದ್ದರೂ ಸೋಂಕು ತಗುಲಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸಮುದಾಯಕ್ಕೆ ಹರಡಿದ್ಯಾ ಎಂಬ ಅನುಮಾನ ಕಾಡುತ್ತಿದೆ.

11 New COVID 19 Cases Reported In Karnataka On April 12th

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ, ಲಾಕ್‌ಡೌನ್‌ ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾಹಿತಿ ನೀಡಲಾಗಿದೆ.

ರಾಜ್ಯಸರ್ಕಾರಗಳ ಬಳಿ ಮಾಹಿತಿ ಮತ್ತು ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಕೇಂದ್ರ ಸರ್ಕಾರ, ಏಪ್ರಿಲ್ 14ರ ನಂತರ ಯಾವ ರೀತಿ ಕ್ರಮ ವಹಿಸಿಬೇಕು ಎಂದು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+