ರಾಜ್ಯದಲ್ಲಿ 11 ಹೊಸ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭ
ಬೆಂಗಳೂರು, ಆಗಸ್ಟ್ 25: ರಾಜ್ಯದ ಪದವಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಅಧಿಕೃತ ಆದೇಶವನ್ನೂ ನೀಡಲಾಗಿದೆ.
ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಆದೇಶ ಹೊರಡಿಸಿದ್ದು, ಸಂಧ್ಯಾ ಶಕ್ತಿ ಯೋಜನೆಯಡಿ 11 ಹೊಸ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳ ಪ್ರಾರಂಭ ಮಾಡಲಾಗುತ್ತಿದ್ದು, 2021- 22ನೇ ಸಾಲಿನ ಅಯವ್ಯಯ ಭಾಷಣದ ಘೋಷಣೆಯಂತೆ ಈ ಯೋಜನೆಯನ್ನು ಕಾರ್ಯಾರಂಭ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಕಾಲೇಜುಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಬಿ.ಕಾಂ ಮತ್ತು ಬಿಸಿಎ ಕೋರ್ಸ್‌ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.
ಹೆಚ್ಚುವರಿ ಸಂಜೆ ಕಾಲೇಜುಗಳ ವ್ಯಾಸಂಗಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದ ಕಾರಣ, ರಾಜ್ಯದ ಒಟ್ಟು 11 ಮಹಾನಗರ ಪಾಲಿಕೆಯಲ್ಲಿ ತಲಾ ಒಂದು ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಆರಂಭವಾಗಲಿದ್ದು, ಹೊಸದಾಗಿ ಆರಂಭವಾಗುತ್ತಿರುವ ಸಂಜೆ ಕಾಲೇಜುಗಳ ಪಟ್ಟಿ ಈ ಕೆಳಕಂಡಂತಿದೆ.
1. ಸರ್ಕಾರಿ ಆರ್.ಸಿ ಕಾಲೇಜು, ಬೆಂಗಳೂರು ನಗರ
2. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಬೆಳಗಾವಿ ನಗರ
3. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು ನಗರ
4. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ, ಮೈಸೂರು
5. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ ನಗರ
6. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಸಿಸಿ ಬಿ ಬ್ಲಾಕ್, ದಾವಣಗೆರೆ ನಗರ
7. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ನಗರ
8. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ
9. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ಬಿಜಾಪುರ ನಗರ
10. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಕಲಬುರಗಿ ನಗರ
Recommended Video
11. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ನಗರ
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications