ಆಸ್ತಿ ಕಲಹ: ಒಂದೇ ಕುಟುಂಬದ 11 ಮಂದಿಯಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು, ಡಿಸೆಂಬರ್ 21: ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಎಂಜಿ ರಸ್ತೆಯ ಗಾಂಧಿ ಪುತ್ಥಳಿ ಮುಂದೆ ನಡೆದಿದೆ.

ರಾಮನಗರ, ಬಿಡದಿ ಸಮೀಪದ ತಾಯಪ್ಪನದೊಡ್ಡಿ ಗ್ರಾಮದ ಕುಟುಂಬವೊಂದರ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಇಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ.

ಆಸ್ತಿ ವಿಚಾರಕ್ಕೆ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ 11 ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ಗಾಂಧಿ ಪುತ್ಥಳಿ ಬಳಿ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

11 of family threaten suicide on MG Road

ಬಿಡದಿ ಪೊಲೀಸರು ಆ ಕುಟುಂಬದವರ ಪರವಾಗಿ ಇದ್ದಾರೆ, ಡಿಸೆಂಬರ್ 16ರಂದು ಅವರು ನಮ್ಮ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದರು ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+