ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾವು ಕೇಸ್: ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Bengaluru Chinnaswamy Stadium Stampede case: ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜೂನ್ 4) ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತು. ಇಂದು (ಜೂನ್ 5) ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿಕೆ ಮಾಡಿದೆ.
ಆರ್‌ಸಿಬಿ ತಂಡವು 17 ವರ್ಷಗಲ್ಲಿ ಒಂದೇ ಒಂದು ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ. ಆದರೆ, ಈ ಬಾರಿ 18ನೇ ಆವೃತ್ತಿಯಲ್ಲಿ ಮೊದಲ ಐಪಿಎಲ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಆದ್ದರಿಂದ ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು.

ಈ ಸಬಂಧ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಸರ್ಜಿ ದಾಖಲಿಸಿಕೊಂಡಿತು. ಅದರ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದ ಸರ್ಕಾರಕ್ಕೆ ನೋಟೀಸ್ ನೀಡಿದೆ. ಅಲ್ಲದೆ, ವಿಚಾರಣೆಯನ್ನು ಜೂನ್ 10 (ಮಂಗಳವಾರ)ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಬುಧವಾರ ನಡೆದ ದುರ್ಘಟನೆ ಸಂಬಂಧ ಸ್ವಯೋಪ್ರೇರಿತ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದೆ. ಯಾವ ರೀತಿಯ ಮೆಡಿಕಲ್ ಫೆಸಿಲಿಟಿ ಮಾಡಲಾಗಿತ್ತು? ಇಂತಹ ಘಟನೆ ನಡೆದಾಗ ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೀರಿ? ಏನಾದರೂ ಎಸ್‌ಒಪಿ ಮಾಡಿಕೊಂಡಿದ್ರಾ? ಇಂತಹ ಕಾರ್ಯಕ್ರಗಳನ್ನು ಮಾಡುವಾಗ ನಿಯಮಗಳನ್ನು ತರಬೇಕು. ನೀವ ಈ ಕೆಲಸವನ್ನು ಮಾಡಿದ್ರಾ? ಎಂದು ಕೋರ್ಟ್ ಪ್ರಶ್ನೆಗಳನ್ನು ಮಾಡಿದೆ.
ಮೆಡಿಕಲ್, ಫೈರ್ ಬ್ರಿಗೇಡ್ ಎಲ್ಲಾ ರೀತಿಯ ವ್ಯವಸ್ಥೆ ಇರಬೇಕು. ಈ ವ್ಯವಸ್ಥೆಯನ್ನು ಮಾಡಿಕೊಂಡಿದ್ರಾ? ಹೀಗೆ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಅಲ್ಲದೆ, ಮುಂದುವರೆದು ಅವರು ಈ ಘಟನೆಗೆ ಯಾರು ಹೊಣೆ?, ಕ್ರಿಕೇಟ್ ಅಸೋಸಿಯೇಷನ್ಮಾ? ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಾ? ಅಂತಲೂ ಪ್ರಶ್ನಿಸಿದರು.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು 21 ಗೇಟ್‌ಗಳಿವೆ. ಆದರೆ 3 ಅನ್ನು ಮಾತ್ರ ಓಪನ್ ಮಾಡಿದ್ದು ಯಾಕೆ ಎಂಬ ಪ್ರಶ್ನೆಗಳನ್ನು ಸಿಜೆ ಅವರು ಕೇಳಿದ್ದಾರೆ. ಕೊನೆಗೆ ಇದೆಲ್ಲಕ್ಕೂ ಸಮಗ್ರ ವರದಿ ಕೊಡಬೇಕು ಎಂದು ಅರ್ಜಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿಕೆ ಮಾಡಿದೆ.
ಸಿದ್ದರಾಮಯ್ಯ ಹೇಳಿದ್ದೇನು?: ಈ ದುರಂತದಿಂದ ಮನಸಿಗೆ ತುಂಬಾ ನೋವಾಗಿದೆ. ನಾನು ಈ ಘಟನೆಯನ್ನು ಸಮರ್ಥಿಸಿಕೊಳ್ಳಲು ಬಯಸುವುದಿಲ್ಲ. ನಮ್ಮ ಸರ್ಕಾರ ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಈ ದುರಂತ ಸಂಭವಿಸಬಾರದಿತ್ತು. ನಾವು ಸಂತ್ರಸ್ತರ ಜೊತೆಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪರಿಹಾರ ಘೋಷಣೆ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ಗಾಯಗೊಂಡವರಿಗೆ ನಮ್ಮ ಸಂತಾಪವಿದೆ. ಮೃತರ ಕುಟುಂಬಗಳೊಂದಿಗೆ ನಾವಿದ್ದೇವೆ. ಈ ದುಃಖದಲ್ಲಿ ಅವರೊಂದಿಗೆ ಭಾಗಿಯಾಗುತ್ತೇವೆ ಎಂದು ಕೆಎಸ್‌ಸಿಎ ಮುಖ್ಯ ಹಣಕಾಸು ಅಧಿಕಾರಿ ಶಿವಾಜಿ ಲೋಕ್ರೆ ಹೇಳಿದ್ದಾರೆ.
ಆರ್‌ಸಿಬಿ ಮತ್ತು ಕೆಎಸ್‌ಸಿಎ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿವೆ. ಈ ಪರಿಹಾರವು ಮಾನವ ಜೀವದ ಬೆಲೆಯನ್ನು ನಿರ್ಧರಿಸಲು ಅಲ್ಲ. ಕಷ್ಟದ ಸಮಯದಲ್ಲಿ ಸಹಾಯ ಮಾಡುವ ಸಣ್ಣ ಪ್ರಯತ್ನ ಎಂದು ಅವರು ಹೇಳಿದರು.
ಆರ್.ಅಶೋಕ್ ಆಕ್ರೋಶ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಸಂಭವಿಸಿದ ಸಾವುಗಳು ಸರ್ಕಾರಿ ಪ್ರಾಯೋಜಿತ ಕೊಲೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications