ಈ ಭಾಗದ ಆಸ್ತಿದಾರರಿಗೆ ಗುಡ್‌ನ್ಯೂಸ್: 300 ಎಕರೆಗೂ ಹೆಚ್ಚು ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ರದ್ದು!
ಮಹತ್ವದ ಬೆಳವಣಿಗೆಯೊಂದರಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ. ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಂದು ಕಡೆ ತೀವ್ರ ಹೋರಾಟ ನಡೆಯುತ್ತಿರುವಾಗಲೇ ಮತ್ತೊಂದು ಕಡೆ ಭೂಸ್ವಾಧೀನ ಪ್ರಕ್ರಿಯೆ ರದ್ದಾಗಿರುವ ಗುಡ್‌ನ್ಯೂಸ್ ರೈತರಿಗೆ ಸಿಕ್ಕಿದೆ. ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದ ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ಬಂದಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೈತರು ಬೃಹತ್ ಅಭಿಯಾನ ಹಾಗೂ ಹೋರಾಟವನ್ನು ಮಾಡುತ್ತಿದ್ದಾರೆ. ದೇವನಹಳ್ಳಿ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಇದರ ನಡುವೆ ಬೆಂಗಳೂರು ಹಾಗೂ ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಿರ್ಮಾಣವಾಗುತ್ತಿದ್ದ ಹೆದ್ದಾರಿ ಮೆಗಾ ಯೋಜನೆಗೆ ಬ್ರೇಕ್ ಬಿದ್ದಂತೆ ಆಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕೆಐಎಡಿಬಿ 300 ಎಕರೆಗೂ ಹೆಚ್ಚು ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿತ್ತು. ಈ ಭೂಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಬೆಂಗಳೂರು ಹಾಗೂ ಮೈಸೂರು ನಡುವಿನ 111 ಕಿ.ಮೀ ಉದ್ದದ ಮೆಗಾ ಯೋಜನೆಯನ್ನು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್ (ನೈಸ್) ವತಿಯಿಂದ ನಡೆಸಲಾಗುತ್ತಿತ್ತು. ಆದರೆ, ಈ ಯೋಜನೆಗೆ ಸ್ಥಳೀಯರು ಹಾಗೂ ರೈತರು ವಿರೋಧ ವ್ಯಕ್ತಪಡಿಸಿದ್ದರು. ಜಮೀನು ವಶಪಡಿಸಿಕೊಂಡು ಬರೋಬ್ಬರಿ 23 ವರ್ಷಕ್ಕಿಂತಲೂ ಹೆಚ್ಚು ಸಮಯವಾಗಿದ್ದರೂ ಅರ್ಜಿದಾರರಿಗೆ ಪರಿಹಾರ ವಿತರಣೆ ಮಾಡಿಲ್ಲ ಎನ್ನುವ ಆಕ್ಷೇಪಣೆ ವ್ಯಕ್ತವಾಗಿತ್ತು. ಈ ಆಕ್ಷೇಣೆಯನ್ನು ಪರಿಗಣಿಸಿರುವ ಕೋರ್ಟ್ ಆದೇಶ ಹೊರಡಿಸಿದೆ ಎನ್ನಲಾಗಿದೆ.
ದೇವನಹಳ್ಳಿ ರೈತರ ಪ್ರತಿಭಟನೆ: ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು. ಈಚೆಗೆ ದೇವನಹಳ್ಳಿ ಚಲೋ ಹಮ್ಮಿಕೊಂಡಿದ್ದರು. ಈ ಭಾಗದಲ್ಲಿ ರೈತರು ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಭಾಗದಲ್ಲಿ 13 ಗ್ರಾಮಗಳ ಜನರು ಭೂಸ್ವಾಧೀನವನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಲವಂತದ ಭೂಸ್ವಾಧೀನ ಮಾಡಬಾರದು ಎಂದು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
1777 ಎಕರೆ ಫಲವತ್ತಾದ ಕೃಷಿಭೂಮಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ವಶಪಡಿಸಿಕೊಳ್ಳಲು ಹೊರಟಿದೆ ರಾಜ್ಯ ಸರ್ಕಾರ. ಇದನ್ನು ವಿರೋಧಿಸಿ ಬರೋಬ್ಬರಿ 1180 ದಿನಗಳಿಂದ 13 ಹಳ್ಳಿಗಳ ರೈತರು ಹೋರಾಡುತ್ತಿದ್ದಾರೆ. ಇದಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದಿಂದಲೂ ಬೆಂಬಲ ವ್ಯಕ್ತವಾಗಿದೆ. ಆದರೆ ರಾಜ್ಯ ಸರ್ಕಾರವು ತನ್ನ ನಿರ್ಧಾರದಿಂದ ಇನ್ನೂ ಹಿಂದೆ ಸರಿದಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ದಿನಗಳ ಕಾಲಾವಕಾಶವನ್ನು ಕೇಳಲಾಗಿದೆ. ಆದರೆ, ಈ ನಡುವೆ ರೈತರು ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ.
ನಟ ಪ್ರಕಾಶ್ ರಾಜ್ ಹಾಗೂ ನಟಿ ರಮ್ಯಾ ಅವರು ಸೇರಿದಂತೆ ಹಲವರು ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications