Greater Bangaluru: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಅನುದಾನ ಬಿಡುಗಡೆ: ಎಷ್ಟು ಕೋಟಿ ಗೊತ್ತಾ?
ಬೆಂಗಳೂರು, ಸೆಪ್ಟೆಂಬರ್ 16: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಇದೀಗ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. 5 ಪಾಲಿಕೆಗಳಿಗೆ ಒಟ್ಟು 125 ಕೋಟಿ ರೂಪಾಯಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಐದು ಮಹಾನಗರ ಪಾಲಿಕೆಗಳಿಗೆ ತಲಾ 25 ಕೋಟಿಯಂತೆ ಒಟ್ಟು 125 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ
ಹೌದು, ಕರ್ನಾಟಕ ಸರ್ಕಾರ ಹೊಸದಾಗಿ ರಚನೆಯಾಗಿರುವ ಐದು ಪಾಲಿಕೆಗಳಿಗೆ ತಲಾ 25 ಕೋಟಿ ರೂ.ಯಂತೆ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಪಾಲಿಕೆಗಳ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗಾಗಿ ಅನುದಾನ ಅಗತ್ಯವಿದೆ. ಹೀಗಾಗಿ ನಗರಾಭಿವೃದ್ಧಿ ಇಲಾಖೆಯಿಂದ 125 ಕೋಟಿ ರೂ. ಬಿಡುಗಡೆಯಾಗಿದೆ.

ಆಸ್ತಿ ತೆರಿಗೆ ಸಂಗ್ರಹದಲ್ಲಿ 500 ಕೋಟಿ ಸಂಗ್ರಹ ಆಗಿತ್ತು. ಅದರಲ್ಲಿ 125 ಕೋಟಿ ರಿಲೀಸ್ ಮಾಡಿದೆ. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಗೆ 25 ಕೋಟಿ, ಹಾಗೂ ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಗೆ 25 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಪ್ರಸ್ತುತ ಸಂಗ್ರಹ ಆಗುತ್ತಿರುವ ಆಸ್ತಿ ತೆರಿಗೆಯ ಹಣ ಸರ್ಕಾರದ ಸುಪರ್ದಿಯಲ್ಲಿದೆ. ಸಂಗ್ರಹವಾದ ತೆರಿಗೆ ಹಣ ಇನ್ನೂ ಹೊಸ ಪಾಲಿಕೆಗಳ ಬ್ಯಾಂಕ್ ಅಕೌಂಟ್‌ಗೆ ಬರುತ್ತಿಲ್ಲ. ಹೀಗಾಗಿ ಅದೆಲ್ಲವೂ ಸರ್ಕಾರದ ಸುಪರ್ದಿಯಲ್ಲಿದೆ. 2025-26ನೇ ಸಾಲಿನಲ್ಲಿ 300 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ ಆಗಿದೆ. 300 ಕೋಟಿ ರೂ.ಯಲ್ಲಿ ಸರ್ಕಾರ 125 ಕೋಟಿ ರೂ.ಯನ್ನ ದೈನಂದಿನ ಆಡಳಿತಾತ್ಮಕ ಮತ್ತು ಇತರೆ ವೆಚ್ಚಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬ್ಯಾಂಕ್ ಅಕೌಂಟ್‌ಗೆ ಅನುದಾನವನ್ನ ವರ್ಗಾಯಿಸಿದೆ ಎಂದು ತಿಳಿದು ಬಂದಿದೆ.
ಪಾಲಿಕೆ ಚುನಾವಣೆ ಕುರಿತು ಸಭೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನೂತನ ಪಾಲಿಕೆಗಳ ಚುನಾವಣೆ ಸಂಬಂಧ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರು ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವ್ಯಾಪ್ತಿಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರ ಸಭೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ, ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ, ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ಎಂ.ವಿ. ರಾಜೀವ್ ಗೌಡ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications