ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣರಾಜ್ಯೋತ್ಸವ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ

|
Google Oneindia Kannada News

ಬೆಂಗಳೂರು, ಜನವರಿ 24: ಜನವರಿ 26 ರಂದು ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸಮಾರಂಭವನ್ನು ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,11,500 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆ ನಿರ್ಮಾಣ, ಬ್ಯಾರಿಕೇಡ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಧ್ವಜಾರೋಹಣ ಮಾಡುವ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆ.

ಮುನ್ನೋಟದ ಅರಿಮೆಯಲ್ಲಿ 'ಗಣರಾಜ್ಯಕ್ಕೊಂದು ಮರುನೋಟ'ಮುನ್ನೋಟದ ಅರಿಮೆಯಲ್ಲಿ 'ಗಣರಾಜ್ಯಕ್ಕೊಂದು ಮರುನೋಟ'

ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಾಭಾವಿ ತಾಲೀಮು ಮೂರು ದಿನಗಳ ಕಾಲ ನಡೆಸಲಾಗುತ್ತಿದ್ದು, ಪಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್ ಸಿಸಿ ಸೇವಾ ದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತ್ ಮತ್ತು ಬ್ಯಾಂಡ್ ನ ಒಟ್ಟು 30 ತುಕಡಿಗಳಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದರು.

12k citizens will take part in R-Day at Manekshaw parade ground

ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು1330 ಮಕ್ಕಳು ಭಾಗವಹಿಸಲಿದ್ದು, ಧ್ವಜಾರೋಹಣ ಸಂದರ್ಭದಲ್ಲಿ ಪುಷ್ಪವೃಷ್ಟಿ ಮಾಡಲು ವಾಯುಪಡೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ಬಹುಮಾನ ವಿತರಣೆ ಮಾಡಲಾಗುತ್ತದೆ.

English summary
Preparations have been completed at Manek shaw parad ground in Bengaluru for celebration of Republic day on Friday. The BBMP has been taken all measures for celebration and expected around 12,000 citizens will take part in the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X