ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ, ಡಿಕ್ಕಿ, 13 ವಿದ್ಯಾರ್ಥಿಗಳಿಗೆ ಗಾಯ

|
Google Oneindia Kannada News

ಬೆಂಗಳೂರು, ಫೆಬ್ರವರಿ 11: ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಈ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ನಾಗಾರ್ಜುನ ಕಾಲೇಜು ಬಸ್‌ಗೆ ಡಿಕ್ಕಿ ಹೊಡೆದಿದೆ. ಹದಿಮೂರು ವಿದ್ಯಾರ್ಥಿಗಳು ಗಾಯಗೊಂಡುದ್ದಾರೆ.ಡೆಲ್ಲಿ ಪಬ್ಲಿಕ್ ಶಾಲಾ ಬಸ್ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ

ಘಟನೆಯಲ್ಲಿ ನಿತೀಶ್​ ಎಂಬ ವಿದ್ಯಾರ್ಥಿಗೆ ಕಾಲು ಮುರಿದಿದೆ. ಪಬ್ಲಿಕ್​ ಸ್ಕೂಲ್​ ಬಸ್​ ಚಾಲಕ ಘಟನೆ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

13 children hurt in Bengaluru bus crash

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ

ಮೊದಲಿಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಗಾರ್ಜುನ ಕಾಲೇಜ್​ ಬಸ್​ಗೆ ಡೆಲ್ಲಿ ಪಬ್ಲಿಕ್​ ಸ್ಕೂಲ್​ ಬಸ್​ ಡಿಕ್ಕಿ ಹೊಡೆದಿದೆ. ಬಳಿಕ ಟ್ರಾನ್ಸ್​ಫಾರಂಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Delhi public school bus crashes to another college bus, in this incident 13 students are injured this incident occured in bagaluru sante of Bengaluru on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X