• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಲೆಗೆ ಪೋಷಕರನ್ನು ಕರೆದು ತಾ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

|

ಬೆಂಗಳೂರು, ಡಿಸೆಂಬರ್ 12: ಶಾಲೆಗೆ ಪೋಷಕರನ್ನು ಕರೆದುಕೊಂಡು ಬಾ ಎಂದಿದ್ದಕ್ಕೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಮ್ಮಲೂರಿನಲ್ಲಿ ನಡೆದಿದೆ.

ವೇಣುಗೋಪಾಲ್(13) ಮೃತ ವಿದ್ಯಾರ್ಥಿ, ಆತ ದೊಮ್ಮಲೂರಿನ ಕೆಆರ್‌ಎಲ್‌ಎಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಘಟನೆಗೂ ಮುನ್ನ ಶಾಲೆಯಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.

ಬೆಂಗಳೂರು; ಟೆಕ್ಕಿ ಪತ್ನಿ ಆತ್ಮಹತ್ಯೆಗೆ ಶರಣು

ಸಹಪಾಠಿಗಳ ನಡುವೆ ಗಲಾಟೆ ನಡೆದ ಸಂದರ್ಭದಲ್ಲಿ ಸಹಪಾಠಿಯೊಬ್ಬನಿಗೆ ವೇಣುಗೋಪಾಲ್ ಚಾಕು ಹಿಡಿದು ಬೆದರಿಸಿದ್ದ ಇದನ್ನು ನೋಡಿದ ಶಿಕ್ಷಕರು ಬೆದರಿಸಿ ನಾಳೆ ಶಾಲೆಗೆ ಪೋಷಕರನ್ನು ಕರೆದುಕೊಂಡು ಬರಬೇಕು ಎಂದು ಹೇಳಿದ್ದರು.

ಅದಕ್ಕೆ ಹೆದರಿದ ವೇಣುಗೋಪಾಲ್ ಮನೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಲೆ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಬೇರೆ ವಿದ್ಯಾರ್ಥಿಗಳ ಪೋಷಕರೆಲ್ಲರೂ ಶಾಲೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
13 year Old Student Venugopal Committed Suicide At His Home By Hanging Himself.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X