ಬೆಂಗಳೂರಿಗೆ 14 ಗ್ರಾಮ ಪಂಚಾಯಿತಿ ಸೇರ್ಪಡೆ ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ!, ಜಾಗ ಇದ್ದರೆ ನೀವೇ ಕೋಟ್ಯಾಧಿಪತಿಗಳು!
ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂದು ಬದಲಾಯಿಸಿದ ಮೇ ಭೂಮಿಗೆ ಚಿನ್ನದ ಬೆಲೆ ಬಂದಿದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಹೌದು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ನಂತರ ಇದೀಗ ಬೆಂಗಳೂರು ಉತ್ತರ ಜಿಲ್ಲೆಯ ಬಗ್ಗೆ ಭರ್ಜರಿ ಚರ್ಚೆ ನಡೆದಿದೆ. ಇದರಿಂದ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ಆಧಾರದ ಮೇಲೆ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರೋಬ್ಬರಿ 14 ಗ್ರಾಮ ಪಂಚಾಯಿತಿಗಳು ಸೇರ್ಪಡೆ ಆಗಲಿವೆ ಎಂದು ಹೇಳಲಾಗುತ್ತಿದ್ದು. ಇದರಿಂದ ಭೂಮಿಗೆ ಬಂಗಾರದ ಬೆಲೆ ಬರುವುದರೊಂದಿಗೆ ರಿಯಲ್ ಎಸ್ಟೇಟ್ ಧಮಾಕ ಬಂದಿದೆ. ಎಲ್ಲೆಲ್ಲಿ ಭೂಮಿಯ ಬೆಲೆ ಹೆಚ್ಚಳವಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಮೇಲೆ ಒತ್ತಡವನ್ನು ಕಡಿಮೆ ಮಾಡುವುದು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಮುಂದಾಗಿದೆ. ಇದರ ಭಾಗವಾಗಿ ಈಗಾಗಲೇ ಬೆಂಗಳೂರು ದಕ್ಷಿಣ ಜಿಲ್ಲೆ ರೂಪಗೊಂಡಿದ್ದು. ಇದೀಗ ತುಮಕೂರು ಜಿಲ್ಲೆಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸುವುದು ಹಾಗೂ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ತುಮಕೂರು ಜಿಲ್ಲೆಯ ಹೆಸರನ್ನು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ಶುರುವಾಗಿದೆ. ಈ ಬಗ್ಗೆ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಅವರು ಸಹ ಅಪ್ಡೇಟ್ಸ್ ಕೊಟ್ಟಿದ್ದಾರೆ.

ರಾಮನಗರದ ಹೆಸರು ಬದಲಾದಂತೆ ತುಮಕೂರು ಜಿಲ್ಲೆಯ ಹೆಸರನ್ನೂ ಬದಲಾಯಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇದರೊಂದಿಗೆ 14 ಗ್ರಾಮ ಪಂಚಾಯಿತಿಗಳಿಗೆ ಬಂಪರ್ ಬಂದಿದೆ. ಹೌದು 14 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಭೂಮಿ ಬೆಲೆ ಷೇರುಮಾರುಕಟ್ಟೆಯಂತೆ ಏರಿಕೆ ಕಾಣುತ್ತಿದೆ.
ಬೆಂಗಳೂರು ಈಗಾಗಲೇ ಸಾಕಷ್ಟು ಅಭಿವೃದ್ಧಿಯಾಗಿದೆ. ಇದರೊಂದಿಗೆ ಭೂಮಿ ಬೆಲೆಯೂ ಭರ್ಜರಿ ಹೆಚ್ಚಳವಾಗಿದೆ. ಭೂಮಿಯ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ವರ್ಗವು ಕಡಿಮೆ ಬೆಲೆಗೆ ಭೂಮಿ ಎಲ್ಲಿ ಸಿಗಲಿದೆ. ಬ್ರ್ಯಾಂಡ್ ವ್ಯಾಲ್ಯೂ ಎಲ್ಲಿ ಹೆಚ್ಚಾಗಲಿದೆ ಎನ್ನುವ ಹುಡುಕಾಟವನ್ನು ಮಾಡುತ್ತಿದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್‌ವೊಂದು ಬಂದಿದೆ. ಬೆಂಗಳೂರು ಮಾತ್ರವಲ್ಲ ಬೆಂಗಳೂರು ಹೊರ ವಲಯ ಹಾಗೂ ಬೆಂಗಳೂರಿನ ಸಮೀಪದ ಜಿಲ್ಲೆಗಳಲ್ಲೂ ರಿಯಲ್ ಎಸ್ಟೇಟ್ ಧಮಾಕ ಶುರುವಾಗಿದೆ. ಬೆಂಗಳೂರಿನ ಮಾದರಿಯಲ್ಲೇ ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ರಿಯಲ್ ಎಸ್ಟೇಟ್ ಬೂಸ್ಟ್‌ಗೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಾಗುವ ನಿರೀಕ್ಷೆ ಇದೆ.
14 ಗ್ರಾಮ ಪಂಚಾಯಿತಿಗಳಿಗೆ ಭರ್ಜರಿ ಬಂಪರ್: ಇನ್ನು ಬೆಂಗಳೂರಿಗೆ ತುಮಕೂರಿನ 14 ಗ್ರಾಮ ಪಂಚಾಯಿತಿಗಳನ್ನು ಸೇರಿಸುವ ಬಗ್ಗೆಯೂ ಭರ್ಜರಿ ಚರ್ಚೆ ನಡೆದಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಹ ಖಚಿತಪಡಿಸಿದ್ದಾರೆ. ತುಮಕೂರು ನಗರದ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶದಿಂದ 14 ಗ್ರಾಮ ಪಂಚಾಯಿತಿಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಭರ್ಜರಿ ಚರ್ಚೆ ನಡೆದಿದೆ. ಒಂದೊಮ್ಮೆ ಇದು ಆದರೆ, ಈ 14 ಗ್ರಾಮ ಪಂಚಾಯಿತಿಗಳು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆಯಾದರೆ ಇಲ್ಲಿ ಭೂಮಿ ಇರುವವರು ಕೋಟ್ಯಾಧಿಪತಿಗಳಾಗಲಿದ್ದಾರೆ ಅಂತಲೇ ಹೇಳಲಾಗುತ್ತಿದೆ.












Click it and Unblock the Notifications