ಮತ್ತಿಕೆರೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಂಡಿದ್ದ ಬಾಲಕ ಸಾವು

ಬೆಂಗಳೂರು, ಮೇ 20: ಮತ್ತಿಕೆರೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ನಿಖಿಲ್(14) ಕೊನೆಯುಸಿರೆಳೆದಿದ್ದಾನೆ.

ಬೆಸ್ಕಾಂ, ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮುಗ್ದ ಜೀವವೊಂದು ಬಲಿಯಾಗಿದೆ. ಮತ್ತಿಕೆರೆ ನಿವಾಸಿಯಾಗಿದ್ದ ನಿಖಿಲ್ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿರುವಾಗ ಕೆಳಗೆ ಬಿದ್ದಿದ್ದ ಹೈ ಓಲ್ಟೇಜ್ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದ, ಮೊದಲು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ವಿಕ್ರೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಬಾಲಕ ಅಸುನೀಗಿದ್ದಾನೆ.

14 year old electrocuted to death after he steps on live wire at Bengaluru

ಬಾಲಕನ ಪೋಷಕರು ಬೆಸ್ಕಾಂ ಹಾಗೂ ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನ ಸಾವಿಗೆ ಬೆಸ್ಕಾಂ ಕಾರಣ ಎಂದು ಆರೋಪಿಸುತ್ತಿದ್ದಾರೆ. ಇದೇ ರೀತಿ ಬೆಂಗಳೂರಿನಲ್ಲಿ ಹಲವಾರು ಘಟನೆಗಳು ನಡೆದಿವೆ. ಒಂದು ವಾರದ ಹಿಂದಷ್ಟೇ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬಾಲಕನೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ವಾರಗಳ ಕಾಲ ಜೀವನ್ಮರಣ ನಡುವೆ ಹೋರಾಟ ನಡೆಸಿ ಕೊನೆಗೂ ಬದುಕಿ ಬಂದಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+