ಯಶವಂತಪುರ ರೈಲು ನಿಲ್ದಾಣ ಅಭಿವೃದ್ಧಿಗೆ ಬಲಿಯಾಗಲಿವೆ 141 ಮರಗಳು, ಸಾರ್ವಜನಿಕರಿಗಿಲ್ಲ ಕಿಂಚಿತ್ತೂ ಕಾಳಜಿ!
ಬೆಂಗಳೂರು, ಜನವರಿ, 19: ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುವುದು, ಮರಗಳ್ನು ಕಡಿಯುವುದು ನಡೆಯುತ್ತಲೇ ಇದೆ. ಆದರೆ ಮೊದಲಾದರೇ ಇಂತಹ ಯೋಜನೆಗಳಿಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದಕ್ಕೆ ಇತ್ತಿಚೆಗೆ ಇದೆಲ್ಲಾ ಬದಲಾಗಿದೆ. ಜನರು ಪ್ರಕೃತಿ ನಾಶದ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳುತ್ತಿಲ್ಲ. ಇದಕ್ಕೆ ಜೀವಂತ ಉದಾಹರಣೆಯಾಗಿ ಯಶವಂತಪುರ ರೈಲು ನಿಲ್ದಾಣದ ಅಭಿವೃದ್ಧಿ ಯೋಜನೆಯಿದೆ.
ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗಾಗಿ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಿಲ್ದಾಣ ಮುಂಭಾಗ ನೂತನ ಕಟ್ಟಡ ಸೇರಿದಂತೆ ಮಾರ್ಪಾಡು ಕಾಮಗಾರಿ ಆರಂಭವಾಗಿದೆ. ಒಟ್ಟು 380 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ.
ನಿಲ್ದಾಣದಲ್ಲಿ ಹೊಸದಾಗಿ ನಾಲ್ಕು ಅಂತಸ್ತಿನ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ಕಟ್ಟಡವು ಮೆಟ್ರೊ ನಿಲ್ದಾಣದ ಕಡೆಗೆ ನಿರ್ಮಾಣಗೊಳ್ಳುತ್ತಿದೆ. 216 ಮೀಟರ್ ಅಗಲದ ಕಾನ್ಕೋರ್ಸ್, ಜೊತೆಗೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರ ನಿರ್ಮಿಸಲಾಗುತ್ತಿದೆ. ಪ್ಲಾಟ್‌ಫ್ಲಾಮ್‌ರ್‍ಗಳ ಮೇಲಿನ ಮಹಡಿಯಲ್ಲಿ ವಾಣಿಜ್ಯ ಮಳಿಗೆಗಳು, ಫುಡ್ ಕೋರ್ಟ್‌ಗಳು ಇರಲಿವೆ ಎನ್ನಲಾಗಿದೆ.

ಇದಕ್ಕಾಗಿ ಸ್ಥಳದಲ್ಲಿರುವ 141 ಪಾರಂಪರಿಕ ಮರಗಳನ್ನು ಕಡಿಯಬೇಕಾಗುತ್ತದೆ. ಬಿಬಿಎಂಪಿಗೆ 253 ಮರಗಳ ತೆರವಿಗೆ ಎಸ್‌ಡಬ್ಲ್ಯೂಆರ್ ಅರ್ಜಿ ಸಲ್ಲಿಸಿದ್ದು, 141 ಮರಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. 79 ಮರಗಳನ್ನು ಉಳಿಸಿಕೊಳ್ಳಲು ಮತ್ತು 33 ಮರಗಳನ್ನು ಸ್ಥಳಾಂತರಿಸಲು ಆದೇಶಿಸಿದೆ.
ಮರ ಕಡಿಯುವ ಪ್ರಸ್ತಾವನೆಗೆ ಎಸ್‌ಡಬ್ಲ್ಯೂಆರ್ ಸಲ್ಲಿಸಿದ ಅರ್ಜಿಗೆ ಸಾರ್ವಜನಿಕ ಪ್ರತಿಕ್ರಿಯೆ ತೀವ್ರ ಕಳಪೆಯಾಗಿದೆ. ಹೌದು, ಕೇವಲ ಒಂದು ಆಕ್ಷೇಪಣೆ ಸಲ್ಲಿಕೆಯಾಗಿದೆ. ಮರಗಳನ್ನು ಕಡಿಯುವುದರಿಂದ ಕೇವಲ ಯಶವಂತಪುರ ಪರಿಸರ ಮಾತ್ರವಲ್ಲದೆ ಇಡೀ ಬೆಂಗಳೂರಿನ ಪರಿಸರದ ಮೇಲೆ ಪರಿಣಾಮ ಬೀರಲಿದ್ದು, ತಾಪಮಾನ ಏರಿಕೆಯಾಗಲಿದೆ ಎಂಬ ಏಕೈಕ ಆಕ್ಷೇಪ ವ್ಯಕ್ತವಾಗಿದೆ ಎಂದು ವೃಕ್ಷ ಅಧಿಕಾರಿ ಹಾಗೂ ಅರಣ್ಯ ಉಪ ಸಂರಕ್ಷಣಾಧಿಕಾರಿ (ಡಿಸಿಎಫ್) ಸರೀನಾ ಸಿಕ್ಕಲಿಗಾರ್ ಹೇಳಿದ್ದಾರೆ.

"ಕಾಮಗಾರಿ ನಡೆಯಲಿರುವ ಪ್ರದೇಶದಲ್ಲಿ ಇರುವ ಗಿಡಗಳಿಗೆ ತೊಂದರೆಯಾಗದಂತೆ ನಿಲ್ದಾಣದ ಅಭಿವೃದ್ಧಿ ಯೋಜನೆಯನ್ನು ಮಾರ್ಪಡಿಸಲು ಅಥವಾ ಮರಗಳಿಲ್ಲದ ಪಕ್ಕದ ಸ್ಥಳಕ್ಕೆ ಸ್ಥಳಾಂತರಿಸಲು ಆಕ್ಷೇಪಣೆದಾರರು ಸೂಚಿಸಿದ್ದಾರೆ. ಈ ವಿಷಯವನ್ನು ಎಸ್‌ಡಬ್ಲ್ಯೂಆರ್ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಅದರ ಪ್ರಕಾರ ಯೋಜನೆ ಮಾಡಲಾಗಿದೆ" ಎಂದಿದ್ದಾರೆ.
ಇನ್ನು, ಅಭಿವೃದ್ಧಿಗಾಗಿ ಕಡಿಯಲು ಗುರುತಿಸಲಾದ ಮರಗಳಲ್ಲಿ ಸಿಲ್ವರ್ ಓಕ್, ಮಾವು, ಹಲಸು, ಬಗಿನಿ, ರಾಯಲ್ ಓಕ್, ತೇಗ, ಬೇವು, ತೆಂಗು, ಸರ್ವೆ, ನೀಲಗಿರಿ, ಅಟ್ಟಿ, ರೈನ್‌ಟ್ರೀ, ಸೀಮೆ ತಂಗಡಿ, ಅರೆಕಾ ಮತ್ತು ಪೇಪರ್ ಮಲ್ಬರಿ ಸೇರಿವೆ.
"ನೀವು ಏನನ್ನಾದರೂ ಅಭಿವೃದ್ಧಿ ಮಾಡಬೇಕಿದ್ದರೇ, ಬೇರೆ ಯಾವುದನ್ನಾದರೂ ಕೆಡವಬೇಕಾಗುತ್ತದೆ. ಅಭಿವೃದ್ಧಿ ಹೊಂದಿದ ನಿಲ್ದಾಣದಲ್ಲಿ ಹೆಚ್ಚಿನ ಮರಗಳನ್ನು ನೆಡಲು ನಾವು ಯೋಚಿಸುತ್ತಿದ್ದೇವೆ" ಎಂದುಎಸ್‌ಡಬ್ಲ್ಯೂಆರ್‌ನ ಮುಖ್ಯ ಆಡಳಿತಾಧಿಕಾರಿ ಎಸ್‌ಪಿಎಸ್ ಗುಪ್ತಾ ಹೇಳಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications