ನಾಳೆ ಬೆಳಗ್ಗೆ ಆರು ಗಂಟೆವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ

Recommended Video

      Karnataka Crisis : ಬೆಂಗಳೂರಿನಲ್ಲಿ ಸೆಕ್ಷನ್ 144, ನಿಷೇಧಾಜ್ಞೆ ಜಾರಿ

      ಬೆಂಗಳೂರು, ಜುಲೈ 23: ರಾಜಕೀಯ ಹೈಡ್ರಾಮಾ ಕೊನೆಯಘಟ್ಟಕ್ಕೆ ಬಂದಿರುವ ಕಾರಣ ಇಂದು ಸಂಜೆ 6 ಗಂಟೆಯಿಂದ ಎರಡು ದಿನಗಳ ಕಾಲ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

      ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಂದು ಸಂಜೆ 6 ಗಂಟೆಯಿಂದ 25ನೇ ತಾರೀಖಿನಿಂದ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

      ಇಂದು ಸಂಜೆ ಬಾರ್ ಮತ್ತು ಕ್ಲಬ್ ಗಳನ್ನು ಸಹ ಬಂದ್ ಮಾಡಲಾಗುತ್ತಿದ್ದು, ಪ್ರತಿಭಟನೆ, ಧರಣಿ, ಕಲ್ಲು ತೂರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲೋಕ್ ಕುಮಾರ್ ಅವರು ಹೇಳಿದರು.

      144 section imposed in Bengaluru city for 48 hours

      ಈಗಾಗಲೇ ನಗರದಾದ್ಯಂತ ಪೊಲೀಸ್ ವಾಹನಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಲಾಗುತ್ತಿದೆ. ನಿಷೇಧಾಜ್ಞೆ ಅನ್ವಯ ಎರಡಕ್ಕಿಂತಲೂ ಹೆಚ್ಚು ಜನ ಒಟ್ಟು ಸೇರುವುದನ್ನು ನಿಷೇಧಿಸಲಾಗಿದೆ.

      ಸರ್ಕಾರ ಇಂದು ಪತನವಾಗುವ ಸ್ಪಷ್ಟ ಲಕ್ಷಣಗಳು ಗೋಚರವಾಗುತ್ತಿದ್ದು, ಈಗಾಗಲೇ ರೇಸ್‌ ಕೋರ್ಸ್‌ ರಸ್ತೆಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+