ಬೆಂಗಳೂರು; ಹೊಸಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು, ಜುಲೈ 23 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1079.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿ. ಆರ್. ಪಿ. ಸಿ. 1973ರ ಕಲಂ 144 (3)ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ವ್ಯಾಪ್ತಿಗೆ ತುರ್ತು ಸೇವೆಗಳು ಒಳಪಡುವುದಿಲ್ಲ. ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಆಯೋಜನೆ ಮಾಡುವಂತಿಲ್ಲ.

Bengaluru

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಜುಲೈ 22ರಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದು, ಸಂತೆ, ಜಾತ್ರೆ, ಸಮ್ಮೇಳನ, ಸಮಾವೇಶಗಳನ್ನು ಆಯೋಜನೆ ಮಾಡುವುದನ್ನು ನಿಷೇಧಿಸಲಾಗಿದೆ. ತಾಲೂಕಿನ ಜನರು ದಿನಬಳಕೆ ವಸ್ತುಗಳು ಹಾಗೂ ತರಕಾರಿ ಖರೀದಿ ಮಾಡಲು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಮತ್ತು ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+