ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಹೊಸಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಜುಲೈ 23 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1079.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿ. ಆರ್. ಪಿ. ಸಿ. 1973ರ ಕಲಂ 144 (3)ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೊರೊನಾದಿಂದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಗುಣಮುಖ ಕೊರೊನಾದಿಂದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಗುಣಮುಖ

ನಿಷೇಧಾಜ್ಞೆ ವ್ಯಾಪ್ತಿಗೆ ತುರ್ತು ಸೇವೆಗಳು ಒಳಪಡುವುದಿಲ್ಲ. ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಆಯೋಜನೆ ಮಾಡುವಂತಿಲ್ಲ.

ಬೆಂಗಳೂರಿನಲ್ಲಿ ಲಾಕ್ ಡೌನ್ ಅಂತ್ಯ; ಟ್ರಾಫಿಕ್ ಜಾಮ್ಬೆಂಗಳೂರಿನಲ್ಲಿ ಲಾಕ್ ಡೌನ್ ಅಂತ್ಯ; ಟ್ರಾಫಿಕ್ ಜಾಮ್

Bengaluru

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಜುಲೈ 22ರಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಮುಂಬೈ ಮೀರಿಸಿದ ಬೆಂಗಳೂರು: ಅತಿ ಹೆಚ್ಚು ಸಕ್ರಿಯ ಕೇಸ್ ಹೊಂದಿರುವ ನಗರ? ಮುಂಬೈ ಮೀರಿಸಿದ ಬೆಂಗಳೂರು: ಅತಿ ಹೆಚ್ಚು ಸಕ್ರಿಯ ಕೇಸ್ ಹೊಂದಿರುವ ನಗರ?

ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದು, ಸಂತೆ, ಜಾತ್ರೆ, ಸಮ್ಮೇಳನ, ಸಮಾವೇಶಗಳನ್ನು ಆಯೋಜನೆ ಮಾಡುವುದನ್ನು ನಿಷೇಧಿಸಲಾಗಿದೆ. ತಾಲೂಕಿನ ಜನರು ದಿನಬಳಕೆ ವಸ್ತುಗಳು ಹಾಗೂ ತರಕಾರಿ ಖರೀದಿ ಮಾಡಲು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಮತ್ತು ಶವ ಸಂಸ್ಕಾರಕ್ಕೆ ಈ ಆದೇಶ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.

English summary
To control spread to Coronavirus in Hoskote taluk of Bengaluru Rural district Section 144 of the CrPC imposed from 2 pm to 6 am every day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X