ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು

|
Google Oneindia Kannada News

ಬೆಂಗಳೂರು, ಜುಲೈ 03 : ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ನಗರದಲ್ಲಿ 889 ಪ್ರಕರಣ ದಾಖಲಾಗಿದೆ. ಬಿಬಿಎಂಪಿಯ 15 ಸಿಬ್ಬಂದಿಗಳಿಗೂ ಸೋಂಕು ತಗುಲಿದೆ.

Recommended Video

15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

ಮಾರ್ಚ್ ತಿಂಗಳಿನಿಂದ ಬಿಬಿಎಂಪಿ ಸಿಬ್ಬಂದಿಗಳು ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೆಲವು ದಿನಗಳಿಂದ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚುತ್ತಿದ್ದು, ಆತಂಕ ಮೂಡಿಸಿದೆ.

ಮಾಸ್ಕ್ ಧರಿಸದಿದ್ದಕ್ಕೆ ಜೂನ್‌ನಲ್ಲಿ ಬಿಬಿಎಂಪಿ ಸಂಗ್ರಹಿಸಿದ ದಂಡ ಎಷ್ಟು?ಮಾಸ್ಕ್ ಧರಿಸದಿದ್ದಕ್ಕೆ ಜೂನ್‌ನಲ್ಲಿ ಬಿಬಿಎಂಪಿ ಸಂಗ್ರಹಿಸಿದ ದಂಡ ಎಷ್ಟು?

ಪೊಲೀಸರಿಗೆ ಸೋಂಕು ತಗುಲುತ್ತಿದೆ. ಅವರಿಗೆ ನೈತಿಕ ಸ್ಥೈರ್ಯ ತುಂಬಲಾಗುತ್ತಿದೆ. ಆದರೆ, ಬಿಬಿಎಂಪಿ ಸಿಬ್ಬಂದಿಗಳನ್ನು ಯಾರೂ ಕೇಳುತ್ತಲೇ ಇಲ್ಲ ಎಂದು ಸಿಬ್ಭಂದಿಗಳು ಆರೋಪ ಮಾಡಿದ್ದಾರೆ.

ಬೆಂಗಳೂರು; ರಾತ್ರಿ 8ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸ್ಥಗಿತ ಬೆಂಗಳೂರು; ರಾತ್ರಿ 8ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

15 BBMP Officials Tested Positive For Covid 19

ಕೊರೊನಾ ವಾರಿಯರ್ಸ್‌ಗೆ 50 ಲಕ್ಷದ ವಿಮೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ, ಬಿಬಿಎಂಪಿ ಸಿಬ್ಬಂದಿಯನ್ನು ಈ ವಿಮೆ ವ್ಯಾಪ್ತಿಗೆ ಸೇರಿಸಿಲ್ಲ ಎಂಬುದು ಆರೋಪವಾಗಿದೆ. ಆದರೆ, ಬಿಬಿಎಂಪಿ ಆಯುಕ್ತರು ಸಿಬ್ಬಂದಿಗಳ ಸುರಕ್ಷತೆ ಬಗ್ಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು?ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು?

ಬಿಬಿಎಂಪಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಖಚಿತವಾಗಿತ್ತು. ಅವರಿಗೆ ಯಾವ ಆಸ್ಪತ್ರೆಗೆ ಭೇಟಿ ನೀಡಬೇಕು, ಎಲ್ಲಿಗೆ ಹೋಗಿ ದಾಖಲಾಗಬೇಕು ಎಂದು ಸರಿಯಾದ ಮಾಹಿತಿ ನೀಡಿಲ್ಲ. ಸಿಬ್ಬಂದಿ ಬಗ್ಗೆ ಕಾಳಜಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ.

ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. "ಕೊರೊನಾ ವಾರಿಯರ್ಸ್‌ಗೆ ಸೋಂಕು ತಗುಲಿದರೆ ಕೇಂದ್ರ ಸರ್ಕಾರದ 50 ಲಕ್ಷ ವಿಮೆಯ ಅಡಿ ಚಿಕಿತ್ಸೆ ನೀಡಲಾಗುತ್ತದೆ" ಎಂದು ಹೇಳಿದ್ದಾರೆ.

English summary
15 BBMP officials tested positive for Covid-19 on Thursday. BBMP workers involved in the fight against Covid-19 from past few months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X