ರಾಜ್ಯದಲ್ಲಿ 15 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆ
ಬೆಂಗಳೂರು, ಏಪ್ರಿಲ್ 13: ಕರ್ನಾಟಕದಲ್ಲಿ ಇಂದು ಹೊಸದಾಗಿ 15 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.
ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಹದಿನೈದು ಪ್ರಕರಣಗಳ ಪೈಕಿ ಹುಬ್ಬಳಿ-ಧಾರವಾಡ 4, ಮಂಡ್ಯ 3, ಬೆಳಗಾವಿ 3, ಬೀದರ್ 2, ಬೆಂಗಳೂರು ನಗರ 1, ಬೆಂಗಳೂರು ಗ್ರಾಮಾಂತರ 1 ಹಾಗೂ ಬಾಗಲಕೋಟೆಯಲ್ಲಿ 1 ಕೇಸ್ ದೃಢವಾಗಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 15 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 247ಕ್ಕೆ ಏರಿದೆ. ಇದುವರೆಗೆ 59 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. #IndiaFightsCornona pic.twitter.com/n3YFfEmt07
— B Sriramulu (@sriramulubjp) April 13, 2020
ಈ ಹದಿನೈದು ಪ್ರಕರಣ ಪೈಕಿ ಬಹುತೇಕ ಎಲ್ಲರೂ ಈ ಹಿಂದೆ ಕೊರೊನಾ ಸೋಂಕು ಪತ್ತೆಯಾಗಿರುವವರ ಜೊತೆ ಸಂಪರ್ಕದಲ್ಲಿದ್ದವರು. ಆದರೆ, ಬೆಂಗಳೂರು ನಗರದ ರೋಗಿಗೆ ದೆಹಲಿ ಪ್ರಯಾಣದ ಮಾಡಿರುವ ಹಿನ್ನೆಲೆ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ದಾಖಲಾಗಿರುವ ರೋಗಿಗೆ ಉಸಿರಾಟದ ತೊಂದರೆ ಇದೆ ಎಂದು ತಿಳಿದಿದೆ.

ಇದುವರೆಗೂ 59 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದೇಶದ ಇತರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ರಾಜ್ಯದಲ್ಲಿ ಇನ್ನು ಹೆಚ್ಚಿನ ಮುಂಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 30ರ ತನಕ ಲಾಕ್‌ಡೌನ್ ವಿಸ್ತರಣೆಗೆ ಸರ್ಕಾರ ಮುಂದಾಗಿದೆ.












Click it and Unblock the Notifications