ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ತಲೆಎತ್ತಲಿವೆ ಇನ್ನೂ 15 ಫ್ಲೈಓವರ್

|
Google Oneindia Kannada News

ಬೆಂಗಳೂರು, ಸೆ.1 : ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಿಸಲು ಹೊಸ ಫ್ಲೈ ಓವರ್‌ಗಳನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಎಲ್ಲಿ ಫ್ಲೈ ಓವರ್ ನಿರ್ಮಿಸಬಹುದು? ಎಂಬ ಕುರಿತು ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ ಹೊಸದಾಗಿ 15 ಫ್ಲೈ ಓವರ್ ನಿರ್ಮಾಣ ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಬಿಬಿಎಂಪಿ ಅಧಿಕಾರಿಗಳಿಗೆ ಎಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಹುದು ಎಂಬ ಬಗ್ಗೆ ವರದಿ ತಯಾರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

flyover

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 30 ಫ್ಲೈಓವರ್‌ಗಳಿವೆ. ಇವುಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿದೆ. ಹೊಸದಾಗಿ 15 ಫ್ಲೈಓವರ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. [ಫ್ಲೈಓವರ್ ಗಾಗಿ 25 ಮನೆ ತೆರವು]

ಸಂಚಾರ ದಟ್ಟಣೆ ಇರುವ ಪ್ರದೇಶಗಳ ವರದಿ ಬಂದ ನಂತರ ಫ್ಲೈ ಓವರ್ ನಿರ್ಮಾಣದ ಬಗ್ಗೆ ಗಮನಹರಿಸಲಾಗುತ್ತದೆ. ಬಿಬಿಎಂಪಿ, ಬಿಡಿಎ ಮತ್ತು ಇತರ ಸಂಸ್ಥೆಗಳ ಸಹಾಯ ಮತ್ತು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು. [ಗ್ರೇಡ್‌ ಸಪರೇಟರ್‌ ಡಿಸೆಂಬರ್‌‌ನಲ್ಲಿ ರೆಡಿ]

ಜವಾಹರ್‌ಲಾಲ್ ನೆಹರೂ ರಾಷ್ಟ್ರೀಯ ನಗರ ನವೀಕರಣ ಯೋಜನೆ (ಜೆಎನ್‌ನರ್ಮ್)ಯಡಿ ಫ್ಲೈ ಓವರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಮೊದಲು ಎಲ್ಲಿ ಫ್ಲೈ ಓವರ್ ನಿರ್ಮಿಸಬೇಕು ಎಂಬ ವರದಿ ಕೈ ಸೇರಿದರೆ ಜೆಎನ್‌ನರ್ಮ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುತ್ತದೆ. ಅಲ್ಲಿಂದ ಅನುಮತಿ ಪಡೆಯಲು ಸುಮಾರು ಐದು ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

English summary
Bangalore is all set to get 15 additional flyovers. At present, there are close to 30 flyovers in the Bruhat Bangalore Mahanagara Palike (BBMP) limits. District in-charge Minister Ramalinga Reddy directed BBMP officials to conduct a survey on traffic movement in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X