ಖಾಲಿ ಇರುವ 1500 ಸರ್ವೇಯರ್ ಹುದ್ದೆಗಳ ಭರ್ತಿ ಶೀಘ್ರ: ಕಾಗೋಡು

1500 ಸರ್ವೇಯರ್ ಗಳನ್ನು ಶೀಘ್ರವೇ ನೇಮಕಾತಿ ಮಾಡಿಕೊಳ್ಳಲಾಗುವುದು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ.

ಬೆಂಗಳೂರು, ಆಗಸ್ಟ್ 24: ರಾಜ್ಯ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ 1500 ಸರ್ವೆಯರ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ ಆಗಲಿದೆ. ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.

1500 surveyors jobs will be filled up says Revenue Minister Kagodu Thimmappa

ಈಗಾಗಲೇ 3 ಸಾವಿರ ಗ್ರಾಮ ಲೆಕ್ಕಿಗರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಇಲಾಖೆಯ ಸುಸ್ಥಿತಿಗೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಬಗರ್ ಹುಕುಂ ಸಾಗುವಳಿ ಜಮೀನಿನ ಹಸ್ತಾಂತರವು ಬಾರಿ ಇರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಗರ್ ಹುಕುಂ ವಿಚಾರದಲ್ಲಿ ಸುಮಾರು ಎರಡೂವರೆ ಲಕ್ಷ ರು. ಅರ್ಜಿಗಳು ಇತ್ಯರ್ಥವಾಗದೇ ಉಳಿದಿವೆ. ಗೋಮಾಳ ಜಮೀನನನ್ನು ಬಗರ್ ಹುಕುನಡಿ ಮಂಜೂರು ಮಾಡಬಾರದು. ಡೀಮ್ಡ್ ಅರಣ್ಯ ಪ್ರದೇಶವನ್ನು ಅರಣ್ಯ ಭೂಮಿಯಿಂದ ಕೈಬಿಡಬಾರದು ಎಂಬ ನಿಯಮ ಇರುವುದರಿಂದ ಸದ್ಯಕ್ಕೆ ಇಂಥ ಅರ್ಜಿಗಳನ್ನು ವಿಲೇವಾರಿ ಮಾಡದೇ ಉಳಿಸಿಕೊಳ್ಳಲಾಗಿದೆ.

ಈ ಬಗ್ಗೆ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಿ, ಡೀಮ್ಡ್ ಅರಣ್ಯ ಪ್ರದೇಶಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ ಆನಂತರ ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+