ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 1,514ಕ್ಕೇ ಏರಿಕೆ

|
Google Oneindia Kannada News

ಬೆಂಗಳೂರು, ಜುಲೈ 06 : ಬೆಂಗಳೂರು ನಗರದಲ್ಲಿ ಒಂದು ವಾರದಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಕೊರೊನಾ ವೈರಸ್ ಸೋಂಕಿತರ ಹೊಸ ಪ್ರಕರಣ ದಾಖಲಾಗಿದೆ. ಇದರಿಂದಾಗಿ ನಗರಲ್ಲಿನ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ 1,514ಕ್ಕೆ ಏರಿಕೆಯಾಗಿದೆ.

Recommended Video

Kushal Mendis arrested ಶ್ರೀಲಂಕಾ ಕ್ರಿಕೆಟಿಗರ್ ಕುಸಾಲ್ ಮೆಂಡಿಸ್ ಅರೆಸ್ಟ್ | Oneindia Kannada

ಭಾನುವಾರ ಒಂದೇ ದಿನ ನಗರದಲ್ಲಿ 1,235 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9,580. ಸೋಂಕಿತರು ಇರುವ ಮನೆಯ ರಸ್ತೆಯಲ್ಲಿ ಬಿಬಿಎಂಪಿ ಸೀಲ್ ಡೌನ್ ಮಾಡಿದೆ.

ಬೆಂಗಳೂರು; ರಾತ್ರಿ 8ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸ್ಥಗಿತ ಬೆಂಗಳೂರು; ರಾತ್ರಿ 8ರ ಬಳಿಕ ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

ಬೆಂಗಳೂರು ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 88ಕ್ಕೆ ಏರಿಕೆಯಾಗಿದೆ. ಕಳೆದ 10 ದಿನದಲ್ಲಿ ನಗರದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ 15.89. ನಗರದಲ್ಲಿ ಇದುವರೆಗೂ 1,24,431 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯ ಮನವಿ ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯ ಮನವಿ

1514 Containment Zone In Bengaluru City

ನಗರದಲ್ಲಿ ಪಶ್ಚಿಮ ವಿಭಾಗದಲ್ಲಿ ಅತಿ ಹೆಚ್ಚು (791) ಕಂಟೈನ್ಮೆಂಟ್ ಝೋನ್‌ಗಳಿವೆ. ಪೂರ್ವ ವಿಭಾಗದಲ್ಲಿ 242, ಮಹದೇವಪುರ ವ್ಯಾಪ್ತಿಯಲ್ಲಿ 124 ಮತ್ತು ದಕ್ಷಿಣ ವಿಭಾಗದಲ್ಲಿ 118 ಕಂಟೈನ್ಮೆಂಟ್ ಝೋನ್‌ಗಳಿವೆ.

ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ

ಆರೋಗ್ಯ ಇಲಾಖೆ ನಗರದ ಜನರಿಗೆ ಮನವಿಯೊಂದನ್ನು ಮಾಡಿದೆ. ಕೋವಿಡ್ - 19 ಸೇರಿದಂತೆ ಎಲ್ಲಾ ಆರೋಗ್ಯ ತುರ್ತು ಸಂದರ್ಭದಲ್ಲಿ 108 ಸಂಖ್ಯೆಗೆ ಕರೆ ಮಾಡಿ ಅಂಬ್ಯುಲೆನ್ಸ್ ಆಗಮಿಸಲಿದೆ ಎಂದು ಹೇಳಿದೆ.

ಒಂದು ವೇಳೆ ಕೋವಿಡ್ ಪಾಸಿಟಿವ್ ಅಥವ ತೀವ್ರ ಉಸಿರಾಟದ ತೊಂದರೆ ಹಾಗೂ ಕೋವಿಡ್ - 19 ಇತರ ಗುಣ ಲಕ್ಷಣಗಳನ್ನು ಹೊಂದಿದ್ದು, ಸರ್ಕಾರಿ ಅಥವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಲು 108 ಅಂಬ್ಯುಲೆನ್ಸ್‌ಗೆ ಕರೆ ಮಾಡಬಹುದಾಗಿದೆ.

English summary
Total number of containment zone in Bengaluru 1,514. In this 1,423 are active. City recorded 1,235 new case on July 5, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X