Bengaluru Film Festival: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ
ಬೆಂಗಳೂರು ಫೆಬ್ರವರಿ 29: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದನ್ನು ಇಂದು ಉದ್ಘಾಟನೆ ಮಾಡಲಾಗಿದ್ದಾರೆ.
ಪ್ರತಿಷ್ಠಿತ 15ನೇ ಬೆಂಗಳೂರು ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ಇಂದು ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಖ್ಯಾತ ನಟ ಜಬ್ಬಾರ್ ಪಟೇಲ್, ಬಾಂಗ್ಲಾ ನಟಿ ಅಜಮೇರಿ ಬಂದೋನ್, ಜೆಕ್ ವಿಮರ್ಶಕಿ ವಿಯರಾ ಲ್ಯಾಂಗರೋವಾ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಉದ್ಘಾಟನಾ ಚಲನಚಿತ್ರವಾಗಿ ಪೀಟರ್‌ಲೂಸಿ ನಿರ್ದೇಶನದ ಸ್ವಿಸ್ ಚಲನಚಿತ್ರ ಬೋಂಜೋರ್ ಸ್ವಿಜರ್್ಲ್ಯಾಂಡ್ ಪ್ರದರ್ಶನಗೊಳ್ಳಲಿದೆ.
ಸಮಾರಂಭದಲ್ಲಿ ಮುರು ಬಾರಿ ಗ್ಯಾಮಿ ಪ್ರಶಸ್ತಿ ಪಡೆದ ರಿಕ್ಕಿ ಕೇಜ್ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. ಈ ಚಿತ್ರೋತ್ಸವದಲ್ಲಿ ಅಬ್ಬಾಸ್ ಕಿರೋಸಮಿ ಹಾಗೂ ಮ್ರಣಾಲದ ಸೇನ್ ನಿರ್ದೇಶನದ ಚಿತ್ರಗಳು ಪುನರಾವಲೋಕನ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.
ಕನ್ನಡ, ಏಷಿಯನ್ ಸಿನಿಮಾ ಸ್ಪರ್ಧಾತ್ಮಕ ವಿಭಾಗ, ಸಮ ಕಾಲೀನ ವಿಶ್ವ ಸಿನಿಮಾ, ವಿಮರ್ಶಕರ ವಾರ, ಸಾಕ್ಷ್ಯಚಿತ್ರ ವಿಭಾಗ, ಜೀವನ ಚರಿತ್ರೆ, ಸಂಸ್ಮರಣೆ- ಹೀಗೆ ಹಲವು ವಿಭಾಗಗಳಲ್ಲಿ ಸುಮಾರು 50ಕ್ಕೂ ಹೆಚ್ಚು ದೇಶಗಳು 200 ಚಿತ್ರಗಳು ಪ್ರದರ್ಶನ ಕಾಣಲಿವೆ.
ನಟ ಧನಂಜಯ್ ಚಿತ್ರೋತ್ಸವದ ರಾಯಬಾರಿಯಾಗಿ ಆಯ್ಕೆಯಾಗಿದ್ದಾರೆ. ಒರಾಯನ್ ಮಾಲ್, ಸುಚಿತ್ರಾ ಸಿನಮಾ ಅಕಾಡೆಮಿ, ಕಲಾವಿದರ ಸಂಘಗಳ 14 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕನ್ನಡ ಚಿತ್ರರಂಗಕ್ಕೆ 90 ವರ್ಷ ತುಂಬಿದ ಪ್ರಯುಕ್ತ ಕನ್ನಡ ವಿಭಾಗದಲ್ಲಿ 30 ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಲೀಲಾವತಿ, ಭಗವಾನ್, ಸಿವಿ ಶಿವಶಂಕರ್, ವಾಣಿಜಯರಾಂ ಗೌರವಾರ್ಥ ಅವರ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸಿನಿಮಾಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ 800 ರೂಪಾಯಿ, ಚಿತ್ರೋದ್ಯಮದ ಸದಸ್ಯರಿಗೆ 400 ರೂಪಾಯಿ, ಹಿರಿಯ ನಾಗರಿಕರಿಗೆ 400 ರೂಪಾಯಿ ಪ್ರವೇಶದ ದರ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಪುನರಾವಲೋಕನ ವಿಭಾಗದಲ್ಲಿ ಮೃಣಾಲ್ ಸೇನ್ ಅವರ ಚಿತ್ರಗಳು ಪ್ರದರ್ಶನ ಆಗಲಿದೆ. ತಶಮಾನೋತ್ಸವ ನೆನಪು ಹಾಗೂ ಶ್ರದ್ಧಾಂಜಲಿ ವಿಭಾಗದಲ್ಲಿ ಸಂಗೀತ ನಿರ್ದೇಶಕ ವಿಜಯ್ ಬಾಸ್ಕರ್, ನಟ ಸಾಬು ದಸ್ತಗೀರ್, ನಿರ್ದೇಶಕ ಭಗವಾನ್, ನಟಿ ಲೀಲಾವತಿ, ನಿರ್ಮಾಪಕ ಸಿ.ವಿ.ಶಿವಶಂಕರ್, ಗಾಯಕಿ ವಾಣಿ ಜಯರಾಂಗೆ ಶ್ರದ್ಧಾಂಜಲಿ ಸಲ್ಲಿಕೆ ಆಗಲಿದೆ.
ಖ್ಯಾತ ಕಲಾವಿದ ಮತ್ತು ರಂಗ ನಿರ್ದೇಶಕ ಡಾ.ಜಬ್ಬಾರ್ ಪಟೇಲ್ ''ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸನದ' ಕೈಪಿಡಿ, ನಟ ಶಿವಕುಮಾರ್ ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications