ಬೆಂಗಳೂರಿನ ಈ ಭಾಗದಲ್ಲಿ 17 ಹೊಸ ಸ್ಕೈವಾಕ್ಗಳ ನಿರ್ಮಾಣ
ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸುಧಾರಣೆಗೆ ಮಹತ್ವದ ಕ್ರಮ ವಹಿಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪೂರ್ವ ನಗರ ಪಾಲಿಕೆ ಆಯುಕ್ತರು ಹೇಳಿದ್ದಾರೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಪೇಯಿಂಗ್ ಗೆಸ್ಟ್ ವಸತಿ ತಪಾಸಣೆಯನ್ನು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ರವರು ನಡೆಸಿದ್ದು, ಪಲ್ಸ್ ಪೋಲಿಯೋ ಅಭಿಯಾನ-2025 ಜಾಗೃತಿ ಸಹ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಹಲವು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಮಹದೇವಪುರ ವಲಯ-1 ವ್ಯಾಪ್ತಿಯ ಸ್ಪೈಸ್ ಗಾರ್ಡನ್, ಕುಂದಲಹಳ್ಳಿ ಮುಖ್ಯ ರಸ್ತೆ ಹಾಗೂ ಭೋಗನಹಳ್ಳಿ ಪಿಜಿ ಹಬ್ ಪ್ರದೇಶಗಳಲ್ಲಿನ ಪೇಯಿಂಗ್ ಗೆಸ್ಟ್ (PG) ವಸತಿಗಳನ್ನು ಆಯುಕ್ತರಾದ ಡಿ.ಎಸ್ ರಮೇಶ್ ಅವರು ಇಂದು ಪರಿಶೀಲಿನೆ ನಡೆಸಿದರು. ಪಿಜಿಗಳು ನಿಗದಿತ SOP ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಿ, ಲೋಪಗಳು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಟ್ರಾಫಿಕ್ ಜಾಮ್ ಕಂಟ್ರೋಲ್ಗೆ ಕಾರ್ಯಸಾಧ್ಯತೆ ಪರಿಶೀಲಿಸಿ
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಇಂಜಿನಿಯರಿಂಗ್ ಇಲಾಖೆ, ಬಿಎಂಟಿಸಿ ಹಾಗೂ ಸಂಚಾರ ಪೊಲೀಸ್ ಇಲಾಖೆ ಅಧಿಕಾರಿಗಳನ್ನೊಳಗೊಂಡ ಜಂಟಿ ಸಭೆ ನಡೆಸಲಾಯಿತು.
21 ಬಸ್ ಶೆಲ್ಟರ್ಗಳ ಸ್ಥಳಾಂತರ: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖ ಜಂಕ್ಷನ್ಗಳ ಸಮೀಪದಲ್ಲಿರುವ 21 ಬಸ್ ಶೆಲ್ಟರ್ಗಳನ್ನು ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಜಂಕ್ಷನ್ಗಳಿಂದ ದೂರಕ್ಕೆ ಸ್ಥಳಾಂತರಿಸುವ ಸಲುವಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಆಯುಕ್ತರು ತಿಳಿಸಿದ್ದಾರೆ.
ಬೆಂಗಳೂರಿನ ಈ ಭಾಗದಲ್ಲಿ 17 ಹೊಸ ಸ್ಕೈವಾಕ್ಗಳ ಪ್ರಸ್ತಾವನೆ
ಪಾದಚಾರಿಗಳ ಸುರಕ್ಷತೆ ಹೆಚ್ಚಿಸುವ ಸಲುವಾಗಿ ಭಟ್ಟರಹಳ್ಳಿ, ಟಿ.ಸಿ. ಪಾಳ್ಯ, ಹೊರವರ್ತುಲ ರಸ್ತೆ, ಒಲ್ಡ್ ಮದ್ರಾಸ್ ರಸ್ತೆ, ಫೀನಿಕ್ಸ್ ಮಾಲ್, ಕಾರ್ಮೆಲರಾಮ್, ದೊಡ್ಡಕನ್ನಳ್ಳಿ ಸೇರಿದಂತೆ ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆ ಮತ್ತು ಜಂಕ್ಷನ್ಗಳಲ್ಲಿ 17 ಹೊಸ ಸ್ಕೈವಾಕ್ಗಳನ್ನು ನಿರ್ಮಿಸುವ ಪ್ರಸ್ತಾವನೆ ಕುರಿತು ಪರಿಶೀಲಿಸಲು ಸೂಚಿಸಲಾಗಿದೆ.
ಬಸ್ -ಬೇಗಳ ವ್ಯವಸ್ಥೆ
ಕಸ್ತೂರಿ ನಗರ, ದೇವಸಂದ್ರ, ITPL ಮುಖ್ಯ ರಸ್ತೆ, ಬೆಳ್ಳಂದೂರು-ಕಸವನಹಳ್ಳಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬಸ್ ಬೇಗಳ ವ್ಯವಸ್ಥೆ ಕಲ್ಪಿಸಲು ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಕೈವಾಕ್ಗಳ ನಿರ್ವಹಣೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಇನ್ನು ಇಂದು ಪರಿಶೀಲನೆ ಮಾಡಲಾಗಿರುವ ವಿಚಾರಗಳಿಗೆ ಸಂಬಂಧಿಸಿದಂತೆ 3 ದಿನಗಳೊಳಗೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಪಲ್ಸ್ ಪೋಲಿಯೋ ಜಾಗೃತಿಗಾಗಿ ಬೈಕ್ ರ್ಯಾಲಿ
ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಐಇಸಿ ಚಟುವಟಿಕೆ ಭಾಗವಾಗಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಯಿತು. ಈ ರ್ಯಾಲಿ ವೈಟ್ಫೀಲ್ಡ್ ಒಳವರ್ತುಲ ರಸ್ತೆ ಸರ್ಕಲ್ನಿಂದ ಪೂರ್ವ ನಗರ ಪಾಲಿಕೆ ಕೇಂದ್ರ ಕಚೇರಿವರೆಗೆ ಸುಮಾರು 5.7 ಕಿಲೋಮೀಟರ್ ದೂರ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಬೈಕ್ ರ್ಯಾಲಿಗೆ ಆಯುಕ್ತರು ಚಾಲನೆ ನೀಡಿದ್ದು, ಆರೋಗ್ಯಾಧಿಕಾರಿ ಡಾ. ಸವಿತಾ ಅವರು ನೇತೃತ್ವ ವಹಿಸಿದ್ದರು. ರ್ಯಾಲಿ ಪಾಲ್ಗೊಂಡ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪಲ್ಸ್ ಪೋಲಿಯೋ ಜಾಗೃತಿ ಫಲಕಗಳನ್ನು ಪ್ರದರ್ಶಿಸಿ, 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications