ಬೆಂಗಳೂರು: ಸ್ನೇಹಿತರಿಗೆ ವಿಡಿಯೋ ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು ಮಾರ್ಚ್ 15: ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ (17) ಕೋಣನಕುಂಟೆಯ ವಸತಿ ಸಮುಚ್ಛಯದ 23ನೇ ಮಹಡಿಯಿಂದ ಜಿಗಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕಟ್ಟಡದಿಂದ ಹಾರುವ ಮೊದಲು ತನ್ನ ಸ್ನೇಹಿತರಿಗೆ ವೀಡಿಯೊ ಸಂದೇಶವನ್ನು ಕಳುಹಿಸಿದ್ದಾನೆ. ಆದರೆ ಅವನು ಏಕೆ ಇಂತಹ ನಿರ್ಧಾರ ತೆಗೆದುಕೊಂಡನೆಂದು ಬಹಿರಂಗಪಡಿಸಿಲ್ಲ.

ಮೃತರನ್ನು ಅಭಿಷೇಕ್ (ಹೆಸರು ಬದಲಾಯಿಸಲಾಗಿದೆ) ಎಂದು ಗುರುತಿಸಲಾಗಿದೆ. ಅವರ ಪೋಷಕರು ವ್ಯಾಪಾರದಲ್ಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ 3.15ರ ಸುಮಾರಿಗೆ ಸೋದರ ಸಂಬಂಧಿಯ ಮನೆಯ ಬಾಲ್ಕನಿಗೆ ಬಂದು ಜಿಗಿದಿದ್ದಾರೆ ಎಂದು ವರದಿಯಾಗಿದೆ. ಆ ಸಮಯದಲ್ಲಿ ಅವರ ಸಂಬಂಧಿಕರು ಮಲಗಿದ್ದರು ಎನ್ನಲಾಗಿದೆ. ವಿದ್ಯಾರ್ಥಿ ಮೇಲಿಂದ ಹಾರಿದಾಗ ಕಾಂಪ್ಲೆಕ್ಸ್‌ನಲ್ಲಿದ್ದ ಸೆಕ್ಯುರಿಟಿ ಗಾರ್ಡ್‌ಗಳಿಗೆ ದೊಡ್ಡ ಶಬ್ದ ಕೇಳಿಬಂದಿದೆ. ತಕ್ಷಣ ಅವರು ಹೊರಬಂದು ನೋಡಿದಾಗ ನಿರ್ಜೀವವಾಗಿ ವಿದ್ಯಾರ್ಥಿ ಬಿದ್ದಿರುವುದನ್ನು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ದ್ವಿತೀಯ ಪಿಯುಸಿ ಓದುತ್ತಿರುವ ಬಾಲಕನಿಗೆ ಯಾವುದೇ ಆರೋಗ್ಯ ಅಥವಾ ಶೈಕ್ಷಣಿಕ ಸಮಸ್ಯೆ ಇಲ್ಲ ಎಂದು ಅಭಿಷೇಕ್ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ, ಅವರು ಬೆಳಗ್ಗೆ 3 ಗಂಟೆಯ ಸುಮಾರಿಗೆ ಒಂದೆರಡು ಸ್ನೇಹಿತರಿಗೆ ವೀಡಿಯೊ ಸಂದೇಶಗಳನ್ನು ಕಳುಹಿಸಿದ್ದು, ಜೀವನದಲ್ಲಿ ಯಾವುದೇ ವೈಯಕ್ತಿಕ ಸಮಸ್ಯೆಗಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ.

17-Year-Old Boy Send Video Messages to Friends, Jumps off 23rd Floor

ಆದರೆ ಮೃತ ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ಸಂದೇಶದಲ್ಲಿ ಸ್ನೇಹಿತರಿಗೆ 'ನಾನು ಹೋರಾಡಬೇಕು ಬೇರೆ ದಾರಿಯಿಲ್ಲ' ಎಂದು ಹೇಳಿದ್ದಾರೆ. ನಿದ್ದೆಯಲ್ಲಿದ್ದ ಆತನ ಸ್ನೇಹಿತರು ಮುಂಜಾನೆ ಸಂದೇಶಗಳನ್ನು ಗಮನಿಸಿ ಅವರಿಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಮಡಿದ್ದಾನೆ. ವಿದ್ಯಾರ್ಥಿ ತೆಗೆದುಕೊಂಡ ಈ ನಿರ್ಧಾರದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಆತನ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+