ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 19 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು, ಆಗಸ್ಟ್ 04: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 19 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಐಐಎಸ್ ಸಿ ಆವರಣದಲ್ಲಿ ವಿದ್ಯಾರ್ಥಿಗಳು, ಬೋಧಕರು, ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಒಟ್ಟು 19 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದಾಗಿ ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ಯಾಂಪಸ್ ನಲ್ಲಿದ್ದ 34 ಮಂದಿ ಪಿಂಚಣಿದಾರರು, ಉದ್ಯೋಗಿಗಳಿಗೂ ಕೊರೊನಾ ಬಂದಿರುವುದಾಗಿ ತಿಳಿಸಲಾಗಿದೆ.

19 People Of IISC Bengaluru Campus Tested Positive For Coronavirus

ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲಾ 50 ಮಂದಿಯನ್ನು ಗೃಹ ಬಂಧನದಲ್ಲಿಡಲಾಗಿದೆ. ಸಂಪೂರ್ಣ ಸಂಬಳ ನೀಡುವ ಭರವಸೆ ನೀಡಲಾಗಿದೆ. ಕ್ಯಾಂಪಸ್ ಆವರಣದಲ್ಲಿನ ಸಾರ್ವಜನಿಕ ಸ್ಥಳಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನೂ ಐಐಎಂಬಿಯಲ್ಲಿ ಮೊದಲ ಕೊರೊನಾವೈರಸ್ ಪ್ರಕರಣ ಪತ್ತೆಯಾಗಿದೆ. ಐಐಎಂಬಿ ಕ್ಯಾಂಪಸ್ ನ ಹೊರಾಂಗಣ ತೋಟಗಾರಿಕೆ ಕೆಲಸ ಮಾಡುತ್ತಿದ್ದ ಏಜೆನ್ಸಿಯೊಂದರ ಸದಸ್ಯರೊಬ್ಬರಿಗೆ ಕೊರೋನಾ ಪಾಸಿಟವ್ ದೃಢಪಟ್ಟಿರುವುದಾಗಿ ಸಂಸ್ಥೆಯ ವಕ್ತಾರರಾದ ಕೆ. ಕವಿತಾ ತಿಳಿಸಿದ್ದಾರೆ.

ಕೊವಿಡ್ ಪಾಸಿಟಿವ್ ಬಂದಿದ್ದ 15 ಹಾಸ್ಟೆಲ್ ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳಲ್ಲಿ ನಗೆಟಿವ್ ಬಂದಿದೆ. ಕಂಟೈನ್ ಮೆಂಟ್ ವಲಯವೆಂದು ಘೋಷಿಸಲಾಗಿದ್ದು, ಸೋಂಕಿತರು ಇದ್ದ ಜಾಗಗಳಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಿ ಶುಚಿಗೊಳಿಸಲಾಗಿದೆ. ಅನಧಿಕೃತ ವ್ಯಕ್ತಿಗಳು ಕ್ಯಾಂಪಸ್ ಆವರಣಕ್ಕೆ ಬಾರದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+