• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಥಮ ಹಾಗೂ ದ್ವಿತೀಯ ಪಿಯು ದಾಖಲಾತಿ ಅವಧಿ ವಿಸ್ತರಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಪ್ರಥಮ ಪಿಯು ದಾಖಲಾತಿಗೆ ಸೆಪ್ಟೆಂಬರ್ 1 ರವರೆಗೆ ಅವಕಾಶ ನೀಡಲಾಗಿತ್ತು. ಮತ್ತು ದ್ವಿತೀಯ ಪಿಯುಗೆ ಆ.30 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್‌ಗಳಿಗೆ ಸೆಪ್ಟೆಂಬರ್ 11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ.

ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25 ರವರೆಗೆ, ಇನ್ನು 2890 ರೂ. ವಿಶೇಷ ದಂಡ ಶುಲ್ಕದೊಂದಿಗೆ ಸೆ.27 ರಿಂದ ಅ.5 ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2021- 22ನೇ ಸಾಲಿನ ಪ್ರಥಮ ಪಿಯು ಪ್ರವೇಶದಲ್ಲಿ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರತಿ ಕಾಲೇಜುಗಳಿಗೆ ಅನುಮತಿ ನೀಡಿದೆ.

ಪಿಯು ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯಿಂದ ಕೆಲವು ಗೈಡ್​ಲೈನ್ಸ್ ಬಿಡುಗಡೆ ಆಗಿದೆ.

ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.

ಪಿಯು ಕಾಲೇಜು ಆರಂಭಕ್ಕೆ ಸೂಚಿಸಿದ ಮಾರ್ಗಸೂಚಿಯ ಇತರೆ ಅಂಶಗಳು ಇಲ್ಲಿದೆ:
* ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು.

* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.

* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ.

* ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.

* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಇರಬೇಕು.

* ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊವಿಡ್​​- 19 ನೆಗೆಟಿವ್ ವರದಿ ಕಡ್ಡಾಯ.

* ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.

* ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯ ಬಳಕೆ .

* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು, ಎಲ್ಲೆಂದರಲ್ಲಿ ಉಗುಳಬಾರದು.

* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.

   ಕಾಂಗ್ರೆಸ್ ಪಾರ್ಟಿ ಸೇರೋಕೆ ಅಪ್ಪ ಮಗನ ಲಾಬಿ ಜೋರಾಗಿದೆ | Oneindia Kannada

   * ಕೋವಿಡ್​ ಸೋಂಕಿತರಿಗೆ ಬಳಸಿದ ಕಟ್ಟಡಗಳನ್ನು ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.

   * ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.

   * ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.

   English summary
   Karnataka PUC Admission 2021: Karnataka pre university board extended first puc and second puc admission dates to 11 september 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X