Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ 2,000 ಪುಟಗಳ ಮೊದಲ ಚಾರ್ಜ್ ಶೀಟ್ ಸಲ್ಲಿಕೆ-SIT ಕಲೆಹಾಕಿದ ಸಾಕ್ಷಿಗಳೆಷ್ಟು?
Prajwal Revanna: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇಡೀ ರಾಜ್ಯ ಅಷ್ಟೇ ಅಲ್ಲದೆ, ವಿದೇಶದವರೆಗೂ ಸದ್ದು ಮಾಡಿತ್ತು. ಇನ್ನು ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಮಾಹಿತಿ ಇಲ್ಲಿದೆ.
ಮೊದಲ ಚಾರ್ಜ್ ಶೀಟ್ ಸಲ್ಲಿಕೆ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಹಾಗಾದರೆ ಎಷ್ಟು ಪುಟ ಹಾಗೂ ಎಷ್ಟು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ ಎಂದು ಇಲ್ಲಿ ತಿಳಿಯಿರಿ.

123 ಸಾಕ್ಷಿಗಳ ಸಂಗ್ರಹ: ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದು, ಸುಮಾರು 2,000 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, 123 ಸಾಕ್ಷಿಗಳನ್ನು ಕಲೆಹಾಕಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ, ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ತನಿಖೆ ನಡೆಸಿದ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ ಎಂದು ತಿಳಿದುಬಂದಿದೆ












Click it and Unblock the Notifications