ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಮಾಸ್ಕ ಧರಿಸದವರಿಂದ ವಸೂಲಿ ಮಾಡಿದ ದಂಡದ ಮೊತ್ತ!

|
Google Oneindia Kannada News

ಬೆಂಗಳೂರು, ಜೂ. 25: ಕೊರೊನಾ ವೈರಸ್ ಸೋಂಕು ಹರಡದಂತೆ ತಟೆಗಟ್ಟಲು ಮನೆಯಲ್ಲಿಯೆ ಮಾಡಿದ ಮಾಸ್ಕ್ ಧರಿಸಿ ಎಂದು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಇದನ್ನೇ ರಾಜ್ಯ ಸರ್ಕಾರ ಹಾಗೂ ತಜ್ಞರು ಇದನ್ನೇ ಹೇಳುತ್ತಿದ್ದಾರೆ. ಆದರೂ ಜನರು ಮಾತ್ರ ಇನ್ನೂ ಮಾಸ್ಕ್ ಧರಿಸುವ ಗೋಜಿಗೆ ಹೋಗುತ್ತಿಲ್ಲ. ಹೀಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಂದ ಬೃಹತ್ ಮೊತ್ತದ ದಂಡವನ್ನು ಸಂಗ್ರಹಿಸಲಾಗಿದೆ.

ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮುಖಗವಸು(ಮಾಸ್ಕ್) ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾಡುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದು, ಇಂದು ಮಾಸ್ಕ್ ಧರಿಸದ 1,268 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 52 ಮಂದಿ ಸೇರಿದಂತೆ 1,320 ಜನರಿಂದ ಒಟ್ಟು 2.64 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.

2.64 lakh fine Collected For Not Following Social Distance And No Mask

ಬೆಂಗಳೂರು ಲಾಕ್‌ಡೌನ್? ಅಥವಾ ಸೀಲ್‌ಡೌನ್? ಸಚಿವರ ಸ್ಪಷ್ಟನೆಬೆಂಗಳೂರು ಲಾಕ್‌ಡೌನ್? ಅಥವಾ ಸೀಲ್‌ಡೌನ್? ಸಚಿವರ ಸ್ಪಷ್ಟನೆ

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಲ್ಲಿಯೂ ಕಾರ್ಯಾಚರಣೆ ಮಾಡಿರುವ ಮಾರ್ಷಲ್‌ಗಳು ದಂಡವನ್ನು ವಸೂಲಿ ಮಾಡಿದ್ದಾರೆ. ಮಾಸ್ಕ್‌ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಂದ ತಲಾ ₹ 200 ದಂಡ ವಸೂಲಿ ಮಾಡಲಾಗಿದೆ.

English summary
₹ 2.64 lakh fine from people who do not maintain a social distance and wear mask in Benagluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X