2 Bengaluru Airport: ವಿಮಾನ ನಿಲ್ದಾಣ: ಕೇಂದ್ರದಿಂದ ಕರ್ನಾಟಕಕ್ಕೆ ಗುಡ್‌ನ್ಯೂಸ್!
Bengaluru Airport 2: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ದೇಶದಲ್ಲಿ ಹಲವು ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಭಾಗದಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣವಾಗ
ಬೇಕಾದರೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮತಿ ನೀಡಬೇಕಾಗುತ್ತದೆ.
ರಾಜ್ಯಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗವನ್ನು ಸಜೆಸ್ಟ್ ಮಾಡಬೇಕಾಗುತ್ತದೆ. ಈ ರೀತಿ ರಾಜ್ಯಗಳು ಸಜೆಸ್ಟ್ ಮಾಡಿದ ಜಾಗದಲ್ಲಿ ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳು ಪೂರ್ತಿ ಪರಿಶೀಲನೆ ಮಾಡುತ್ತಾರೆ. ಬೆಂಗಳೂರಿನ / ರಾಜ್ಯದ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೂ ಮೂರು ಜಾಗಗಳನ್ನು ನಿಗದಿ ಮಾಡಲಾಗಿದೆ. ಇನ್ನು ವಿಮಾನ ನಿಲ್ದಾಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿಗಿಂತ ಬೆಂಗಳೂರು ಹಾಗೂ ಕರ್ನಾಟಕಕ್ಕೆ ಹೆಚ್ಚು ಸಪೋರ್ಟ್ ಮಾಡುತ್ತಿದೆ. ಅದು ಯಾಕೆ ಎನ್ನುವ ವಿವರ ಇಲ್ಲಿದೆ.
ದೇವನಹಳ್ಳಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಾಕಷ್ಟು ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗಲಿದೆ. ಹೀಗಾಗಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ 2030 ಅಥವಾ 2035ರ ವೇಳೆಗೆ ಭಾರೀ ಒತ್ತಡ ಆಗಲಿದ್ದು.
ಅಭಿವೃದ್ಧಿ, ಒತ್ತಡವನ್ನು ನಿಭಾಯಿಸುವ ದೃಷ್ಟಿಯಿಂದ ಹಾಗೂ ಜನರ ಬೇಡಿಕೆಗೆ ಅನುಗುಣವಾಗಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಅವಶ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಹೆಚ್ಚು ಸಕ್ರಿಯವಾಗಿದೆ. ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಪ್ರಯತ್ನಿಸುತ್ತಿದೆ. ಆದರೆ, ವಿಮಾನ ನಿಲ್ದಾಣದ ವಿಚಾರದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ತಮಿಳುನಾಡಿಗಿಂತ ಕರ್ನಾಟಕಕ್ಕೆ ಹೆಚ್ಚು ಮನ್ನಣೆ ಕೊಡುತ್ತಿದೆ. ಅದಕ್ಕೆ ನಾಲ್ಕು ಕಾರಣ ಇದೆ. ಅದರ ವಿವರ ಇಲ್ಲಿದೆ. ಕರ್ನಾಟಕ ಜಾಗ ನಿಗದಿ ಮಾಡಿದರೆ ವಿಮಾನ ನಿಲ್ದಾಣ ಪ್ರಕ್ರಿಯೆ ಮುಂದುವರಿಸೋಣ ಅಂತ ಕೇಂದ್ರ ಸರ್ಕಾರ ಹೇಳಿದೆ.

ಮೈತ್ರಿ ಲೆಕ್ಕಾಚಾರ: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ಧರೂ ಕೇಂದ್ರ ಸರ್ಕಾರ ಮನ್ನಣೆ ಕೊಡುತ್ತಿರುವುದರ ಹಿನ್ನೆಲೆ ಅಥವಾ ಮುಖ್ಯ ಕಾರಣ ಮೈತ್ರಿ ಲೆಕ್ಕಾಚಾರ. ಬಿಜೆಪಿ - ಜೆಡಿಎಸ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದು. ಕೇಂದ್ರದಲ್ಲಿ ಮೈತ್ರಿ ಮುಂದುವರಿದಿದೆ. ಅಲ್ಲದೆ ಮೈತ್ರಿ ಪಕ್ಷಗಳು ರಾಜ್ಯಕ್ಕೆ ಕೊಡುಗೆ ನೀಡುತ್ತಿವೆ ಎನ್ನುವುದನ್ನು ತೋರಿಸಬೇಕಿದೆ. ಕೇಂದ್ರ ಸರ್ಕಾರವು ಅಭಿವೃದ್ಧಿ ವಿಚಾರದಲ್ಲಿ ರಾಜಿಮಾಡಿಕೊಳ್ಳಲ್ಲ ಎನ್ನುವುದನ್ನು ತೋರಿಸಬೇಕಿದೆ.
ಕರ್ನಾಟಕದ ಸಂಸದರು: ಕರ್ನಾಟಕದ ಬಿಜೆಪಿ ಸಂಸದರ ಸಂಖ್ಯೆ ಹೆಚ್ಚಾಗಿ ಇದೆ. ಬಿಜೆಪಿ 17 ಹಾಗೂ ಜೆಡಿಎಸ್‌ನ 2 ಸಂಸದರು ಸೇರಿ ಒಟ್ಟು 19 ಸಂಸದರು ಇದ್ದಾರೆ. ಮೈತ್ರಿ ಪಕ್ಷದ ಸಂಸದರು ಕರ್ನಾಟಕಕ್ಕೆ ಹಾಗೂ ಬೆಂಗಳೂರಿಗೆ ಹೆಚ್ಚು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ತೋರಿಸಬೇಕಿದೆ. ಬೆಂಗಳೂರು ಎಂದೂ ಮುಳುಗದ ಸೂರ್ಯನಂತೆ ಅಭಿವೃದ್ಧಿಯಾಗುತ್ತಿದ್ದು. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವೂ ಇತಿಹಾಸ ಸೃಷ್ಟಿಸಲಿದೆ.
ಬ್ರ್ಯಾಂಡ್ ಬೆಂಗಳೂರಿಗೆ ಪೈಪೋಟಿ: ಇನ್ನೊಂದು ವಿಚಾರವೆಂದರೆ ಕಾಂಗ್ರೆಸ್ ಸರ್ಕಾರ ಮತ್ತು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದ್ದಾರೆ. ಇದಕ್ಕೆ ಟಾಂಗ್ ಕೊಟ್ಟು ನಾವೇ ಬೆಂಗಳೂರು ಅಭಿವೃದ್ಧಿ ಕೊಡುಗೆ ನೀಡಿದ್ದೇವೆ ಎನ್ನುವ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.
ಬೆಂಗಳೂರು / ಬಿಬಿಎಂಪಿ ಚುನಾವಣೆ: ಇನ್ನು ಇದು ಮುಖ್ಯ ಕಾರಣವಲ್ಲದಿದ್ದರೂ. ಎಲ್ಲಾ ರಾಜಕೀಯ ಪಕ್ಷಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ಮೇಲೆ ಕಣ್ಣಿಟ್ಟಿವೆ. ಬಿಬಿಎಂಪಿ ಚುನಾವಣೆಯು ಇದೇ ವರ್ಷ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ಸಮಯದಲ್ಲಿ ಈ ಅಭಿವೃದ್ಧಿ ವಿಚಾರವನ್ನು ಅಸ್ತ್ರವನ್ನಾಗಿಸಿಕೊಳ್ಳುವ ದೀರ್ಘಕಾಲದ ಲೆಕ್ಕಾಚಾರವೂ ಇದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರವು ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇನ್ನೊಂದು ಸಭೆ ನಡೆಯಬೇಕಾಗಿದ್ದು, ಆ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಇದೀಗ 2 ಜಾಗಗಳನ್ನು ಅಂತಿಮ ಮಾಡಿರುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹೇಳಿದೆ. ಈ ವಿಚಾರವಾಗಿ ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಬೇಕಿದೆ.












Click it and Unblock the Notifications