ಬೆಂಗಳೂರು: ಮೇಲ್ಸೇತುವೆಯಿಂದ ಬಿದ್ದ ಕಾರು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು, ಡಿಸೆಂಬರ್ 20: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರ್ ವೊಂದು ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದ ಕಾರು, ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದೆ. ಕಾರಿನ ಚಾಲಕ ವರುಣ್ ಜೈನ (31) ಸ್ಥಿತಿ ಗಂಭೀರವಾಗಿದೆ.

ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚೈತ್ರಾ, ರಚಿತಾ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಯಲಹಂಕ ಆಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತದಿಂದಾಗಿ ಸಂಚಾರಕ್ಕೆ ತೊಂದರೆಯಾಗಿದ್ದು, ಪೊಲೀಸರು ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ ಬಳಿಕ ಸಂಚಾರ ವ್ಯವಸ್ಥೆ ಸರಿಯಾಗಿದೆ. ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications