ರನ್ ವೇ ಬಿಟ್ಟು ವಿಮಾನ ಓಡಿಸಿ, ಮನೆಗೆ ಹೋದ ಪೈಲಟ್‌ಗಳು!
ಬೆಂಗಳೂರು, ಜನವರಿ 10: ವಿಮಾನವನ್ನು ಸರಿಯಾಗಿ ರನ್‌ವೇನಲ್ಲಿ ಇಳಿಸದೇ ಪಕ್ಕದ ಹುಲ್ಲು ಹಾಸಿನ ಮೇಲೆ ಓಡಿಸಿದ್ದಕ್ಕೆ 'ಗೋ ಏರ್' ವಿಮಾನದ ಇಬ್ಬರು ಪೈಲಟ್‌ಗಳನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಕೆಲಸದಿಂದ ಅಮಾನತು ಮಾಡಿ, ಮನೆಗೆ ಕಳುಹಿಸಿದೆ.
ಕಳೆದ ವರ್ಷ ನವೆಂಬರ್ 11 ರಂದು ಬೆಂಗಳೂರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದ ಘಟನೆಯನ್ನು ತನಿಖೆ ನಡೆಸಿ, ಡಿಜಿಸಿಎ ಗುರುವಾರ ಈ ಕ್ರಮ ಕೈಗೊಂಡಿದೆ. ನ 11 ರಂದು ನಾಗಪುರದಿಂದ ಬೆಂಗಳೂರಿಗೆ ಬರುತ್ತಿದ್ದ 'ಗೋ ಏರ್' ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ, ಮಂಜು ಮುಸುಕಿದ್ದ ಕಾರಣ ರನ್‌ವೇ ಬಿಟ್ಟಿ ವಿಮಾನವನ್ನು ಪೈಲಟ್‌ಗಳು ಪಕ್ಕದ ಹುಲ್ಲು ಹಾಸಿನ ಮೇಲೆ ಓಡಿಸಿದ್ದಾರೆ.
ವಿಮಾನ ಸರಿಯಾಗಿ ಲ್ಯಾಂಡ್ ಆಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಪೈಲಟ್‌ಗಳು ವಿಮಾನವನ್ನು ಹೈದರಾಬಾದ್‌ನತ್ತ ತಿರುಗಿಸಿ ಅಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದರು. ಅಂದು ಆ ವಿಮಾನದಲ್ಲಿ 180 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಡಿಜಿಸಿಎ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಿತ್ತು. ಪೈಲಟ್‌ಗಳು ಮಂಜು ಮುಸುಕಿದ ವಾತಾವರಣ ಇದ್ದಾಗ ಅನುಸರಿಸ ಬೇಕಾದ ಕ್ರಮಗಳನ್ನು ಬಿಟ್ಟು, ಮನಬಂದಂತೆ ವರ್ತಿಸಿದ್ದಾರೆ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಪೈಲಟ್ ಹಾಗೂ ಕೋ ಪೈಲಟ್‌ನ್ನು ಘಟನೆ ನಡೆದ ದಿನದಿಂದ ಮುಂದಿನ ಆರು ತಿಂಗಳವರೆಗೆ ಅಮಾನತು ಮಾಡಲಾಗಿದೆ. ಈ ಹಿಂದೆ ಕೂಡ ಈ ಇಬ್ಬರೂ ಪೈಲಟ್‌ಗಳು ಅಮಾನತುಗೊಂಡಿದ್ದರು ಎಂಬುದು ತಿಳಿದು ಬಂದಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications