ಬೆಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು
ಬೆಂಗಳೂರು, ಜೂನ್ 23: ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಹಾಸನ ಜಿಲ್ಲೆ, ಹೊಳೆನರಸಿಪುರ ನಿವಾಸಿಗಳಾದ ಶ್ರೀಧರ್(24) ಮತ್ತು ಪುನೀತ್ (22) ಎಂದು ಗುರುತಿಸಲಾಗಿದೆ.

ಕಾರು ವೇಗವಾಗಿ ಚಲಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಜೂನ್ 20 ರಂದು ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಐವರು ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದರು.
ಗುಜರಾತ್ ನಲ್ಲಿ ಅಪಘಾತ: 7 ಜನ ಸಾವು
ಇಂದು ಬೆಳಿಗ್ಗೆ ಗುಜರಾತಿನ ಭಾವ್ನಗರ-ಸೋಮನಾಥ್ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿದ್ದು, 24 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋನಲ್ಲಿ ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ 5 ಜನ ಮೃತರಾಗಿದ್ದರಲ್ಲದೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ದಿನೇ ದಿನೇ ದೇಶದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳು ಆತಂಕ ಸೃಷ್ಟಿಸಿದೆ.












Click it and Unblock the Notifications