ಬೆಂಗಳೂರಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತ
ಬೆಂಗಳೂರು, ಫೆಬ್ರವರಿ 10: ಬೆಂಗಳೂರಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತ ಸಂಭವಿಸಿದೆ. ಪ್ರಭಾವಿ ವ್ಯಕ್ತಿಯೊಬ್ಬರ ಮಗನ ಕಾರು ಇದು ಎಂದು ತಿಳಿದುಬಂದಿದೆ.
ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಬಳಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿಗೆ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಮಾಡಿದ ಬಳಿಕ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ, ಅಪಘಾತದ ಬಳಿಕ ಏನಾಗಿದೆ ಅವರ ಪರಿಸ್ಥಿತಿ ಎಂದು ನೋಡದೆ ಹಾಗೆಯೇ ಓಡಿ ಹೋಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಸದಾಶಿವನಗರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications