ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರ ಸಾವು
ಬೆಂಗಳೂರು, ಏ.5: ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಯಶವಂತಪುರದ ಆರ್‌ಎಂಸಿ ಯಾರ್ಡ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಪಾರ್ಕಿಂಗ್ ಗಾಗಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು. ರಾಕೇಶ್ ಹಾಗೂ ರಾಹುಲ್ ಮೃತ ದುರ್ದೈವಿಗಳಾಗಿದ್ದಾರೆ.
ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಕಟ್ಟಡ ಕುಸಿತ ಸಂಭವಿಸಿದೆ. ಸುಮಾರು 50ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕಟ್ಟಡದೊಳಗಿದ್ದರು.

ಮೌಲ್ಡಿಂಗ್ ಕೆಲಸ ನಡೆಯುತ್ತಿತ್ತು. ಮಣ್ಣು ಕುಸಿತವೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ನಾಲ್ಕು ಜನರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದಲ್ಲಿ ಕಟ್ಟಡ ದುರಂತ ಸಂಭವಿಸಿ ತಿಂಗಳು ಕೂಡ ಕಳೆದಿಲ್ಲ, ಇದೀಗ ಬೆಂಗಳೂರಲ್ಲಿ ಇಂತಹ ಘಟನೆ ನಡೆದಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.












Click it and Unblock the Notifications