ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಲಿದೆ ಸುರಂಗ ರಸ್ತೆ

By Nayana
|
Google Oneindia Kannada News

ಬೆಂಗಳೂರು, ಜು.15: ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು ಸುರಂಗ ಮಾರ್ಗ ನಿರ್ಮಾಣ ಮಾಡಲು ಪ್ರಾಧಿಕಾರ ಮುಂದಾಗಿದ್ದು, ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದೆ.

ಪ್ರಸ್ತುತ ಈ ವಿಮಾನ ನಿಲ್ದಾಣದ ಮೂಲಕ ವಾರ್ಷಿಕ 6 ಕೋಟಿ ಮಂದಿ ಪ್ರಯಾಣ ಮಾಡುತ್ತಿದ್ದಾರೆ, ಇನ್ನುಮುಂದೆ ಇದರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಈ ವೇಳೆಯಲ್ಲಿ ಇಲ್ಲಿಗೆ ಬರುವ ವಾಹನಗಳ ಸಂಖ್ಯೆ ಮಿತಿಮೀರುವ ಸಾಧ್ಯತೆ ಇದೆ ಹಾಗಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

ಖಾಕಿ ಭದ್ರತೆಯಲ್ಲಿ ನವಯುಗ ಟೋಲ್ ನಲ್ಲಿ ಶುಲ್ಕ ಸಂಗ್ರಹಖಾಕಿ ಭದ್ರತೆಯಲ್ಲಿ ನವಯುಗ ಟೋಲ್ ನಲ್ಲಿ ಶುಲ್ಕ ಸಂಗ್ರಹ

ಶೀಘ್ರದಲ್ಲೇ ಎರಡನೇ ಟರ್ಮಿನಲ್‌ ಕಾರ್ಯ ಪೂರ್ಣಗೊಳ್ಳಲಿದೆ. ಏರ್‌ಪೋರ್ಟ್‌ಗೆ ಸುಲಭವಾಗಿ ಸಂಪರ್ಕ ಸಾಧಿಸುವ ಪೂರ್ವ ಭಾಗದಲ್ಲಿ ಸುಮಾರು 1033 ಕೋಟಿ ರೂ. ವೆಚ್ಚದಲ್ಲಿ ಸುರಂಗ ನಿರ್ಮಿಸಲು ಉದ್ದೇಶಿಸಲಾಗಿದೆ. ಎರಡು ಹಂತದಲ್ಲಿ ಕಾಮಗಾರಿ ನಡೆಯಲಿದ್ದು, ಮೊದಲ ಹಂತದಲ್ಲಿ ಕಾಮಗಾರಿಗೆ ಅವಶ್ಯಕವಾಗಿರುವ ವಾಹನಗಳ ಓಡಾಟಕ್ಕೆ ರಸ್ತೆಗಳನ್ನು ನಿರ್ಮಿಸಿಕೊಳ್ಳಲಾಗುತ್ತಿದೆ.

State govt denies equity infusion in KIAL

ಜೂ.2019ರ ವೇಳೆಗೆ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಲಿದೆ. ಎರಡನೇ ಹಂತದ ರಸ್ತೆ ನಿರ್ಮಾಣ, ಪಾದಚಾರಿ ಮಾರ್ಗ ಸೇರಿದಂತೆ ಸಂಪೂರ್ಣ ಸುರಂಗ ಮಾರ್ಗ ನಿರ್ಮಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. 2023ಕ್ಕೆ ಈ ಕಾಮಗಾರಿ ಮುಕ್ತಾಯಗೊಳ್ಳಲಿದೆ.

ಸುರಂಗ ಮಾರ್ಗ ನಿರ್ಮಿಸಲು ಪ್ರಮುಖವಾಗಿ ಮೂರು ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು, ಈಗಿರುವ ವಿಮಾನ ನಿಲ್ದಾಣಕ್ಕೆ ಪ್ರವೇಶವಿರುವ ಎನ್‌ಎಚ್‌ 44ರ ದೊಡ್ಡ ಜಾಲ ಮತ್ತು ನೈಋತ್ಯ ಭಾಗದಿಂದ ಸುರಂಗ ಮಾರ್ಗ ನಿರ್ಮಿಸಲು ಚಿಂತನೆ ನಡೆದಿತ್ತು ಆದರೆ ಸಂಚಾರ ದಟ್ಟಣೆ , ಕೆಲವು ತಾಂತ್ರಿಕ ಕಾರಣಗಳಿಂದ ಆ ಯೋಜನೆ ಅಲ್ಲಿಯೇ ಕೈಬಿಡಲಾಗಿತ್ತು.

English summary
From the east side of Kempegowda International Airport around 2.7 km long tunnel road will be constructed which connects second terminus at the cost of rs.1033 crores before 2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X