ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking News: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದ ಇಬ್ಬರಿಗೆ ಕೊರೊನಾವೈರಸ್

|
Google Oneindia Kannada News

ಬೆಂಗಳೂರು, ನವೆಂಬರ್ 27: ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊವಿಡ್-19 ಹೊಸ ರೂಪಾಂತರಿ ಓಮ್ರಿಕಾನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಹೊಸ ಭೀತಿ ಶುರುವಾಗಿದೆ. ಈ ಆತಂಕದ ನಡುವೆ ಅದೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಪ್ರಯಾಣಿಕರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೊಸ ಕೋವಿಡ್‌ ರೂಪಾಂತರದ ಬಗ್ಗೆ ನೀವು ತಿಳಿಯಲೇ ಬೇಕಾದ ಮಾಹಿತಿ..ಹೊಸ ಕೋವಿಡ್‌ ರೂಪಾಂತರದ ಬಗ್ಗೆ ನೀವು ತಿಳಿಯಲೇ ಬೇಕಾದ ಮಾಹಿತಿ..

ಅಧಿಕಾರಿಗಳ ಪ್ರಕಾರ, ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ವಿಮಾನದಲ್ಲಿ ಬೆಂಗಳೂರಿಗೆ 94 ಮಂದಿ ಪ್ರಯಾಣಿಕರು ಶನಿವಾರ ಬಂದಿಳಿದಿದ್ದಾರೆ. ಈ ಪೈಕಿ ಇಬ್ಬರಲ್ಲಿ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ.

2 South African Passengers Test Covid Positive at Bengaluru Airport

ಇಬ್ಬರು ಸೋಂಕಿತರು ಕ್ವಾರೆಂಟೈನ್:
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್-19 ಸೋಂಕು ಪತ್ತೆಯಾದ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಯಾಣಿಕರನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಇಬ್ಬರು ಸೋಂಕಿತರ ಗಂಟಲು ಮಾದರಿಯನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಶನಿವಾರ ಒಂದೇ ದಿನ 10 ರಾಷ್ಟ್ರಗಳಿಂದ ಒಟ್ಟು 548 ಪ್ರಯಾಣಿಕರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಮಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ಬಂದವರು 1,000 ಮಂದಿ:
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈವರೆಗೂ 1,000ಕ್ಕೂ ಅಧಿಕ ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ. ಎಲ್ಲರನ್ನೂ ಕೊವಿಡ್-19 ಸೋಂಕಿನ ಪರೀಕ್ಷೆಗೊಳಪಡಿಸಲಾಗಿದೆ. 10 ದಿನಗಳ ನಂತರದಲ್ಲಿ ಮತ್ತೊಂದು ಬಾರಿ ಕೊರೊನಾವೈರಸ್ ಸೋಂಕಿನ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈಗಾಗಲೇ ಆಗಮಿಸಿರುವ ವಿದೇಶಿಗರನ್ನು ಕೂಡಾ ಸೋಂಕು ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

English summary
2 South African Passengers Test Covid Positive at Bengaluru Airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X