ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು, ನ.3 : ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಎರಡು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಭಾನುವಾರ ನಡೆದಿದ್ದು, ಆರೋಪಿಯನ್ನು ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಾಕೋಲೆಟ್ ಕೊಡಿಸುವುದಾಗಿ ಹೇಳಿ ಬೆಳ್ಳಂದೂರು ನಿವಾಸಿ ಸುರೇಶ್ (29) ಪಕ್ಕದ ಮನೆಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ತಮಿಳುನಾಡು ಮೂಲದ ಸುರೇಶ್ ನಗರದ ಖಾಸಗಿ ಕಂಪನಿಯೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ, ಇತ್ತೀಚೆಗೆ ಪತ್ನಿಯಿಂದ ವಿಚ್ಛೇದನ ಪಡೆದಿದ್ದ ಪೊಲೀಸರು ಹೇಳಿದ್ದಾರೆ. [ಲೈಂಗಿಕ ದೌರ್ಜನ್ಯ ಪ್ರಕರಣ, ಶಿಕ್ಷಕ ಪೊಲೀಸ್ ವಶಕ್ಕೆ]

ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚಾಕೋಲೆಟ್ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು, ಸಮೀಪದಲ್ಲಿದ್ದ ಆಟೋವೊಂದರ ಹಿಂಭಾಗ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆರೋಪಿ ವರ್ತನೆಯಿಂದ ಹೆದರಿದ ಬಾಲಕಿ ಕಿರುಚಿಕೊಂಡಿದ್ದಾಳೆ. [ಕೇಂಬ್ರಿಡ್ಜ್ ಶಾಲೆ ಪ್ರಿನ್ಸಿಪಾಲ್, ನಿರ್ದೇಶಕನಿಗೆ ಜಾಮೀನು]
ಅಷ್ಟರಲ್ಲಿ ಬಾಲಕಿ ತಾಯಿ ಮನೆಯಿಂದ ಹೊರಬಂದಾಗ ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ನಂತರ ಘಟನೆ ಬಗ್ಗೆ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಲೈಂಗಿಕ ದೌರ್ಜನ್ಯ ನಡೆಸಿರುವುದು ತಿಳಿದುಬಂದಿದೆ.
ಆರೋಪಿ ಬಗ್ಗೆ ಮಾಹಿತಿ ಪಡೆದ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 376ರ ಅಡಿ ಆರೋಪಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.












Click it and Unblock the Notifications