20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದು, ಶಾಕ್ ಕೊಟ್ಟ ಬಿಬಿಎಂಪಿ!
Property Seizure: ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿಗಳ ವಿಚಾರದಲ್ಲಿ ಹಿಂದೆ ಯಾವೊತ್ತು ತೆಗೆದುಕೊಳ್ಳದೆ ಇರುವ ಕಠಿಣ ಕಾನೂನುಗಳನ್ನು ಜಾರಿ ಮಾಡುತ್ತಿದೆ. ಒತ್ತುವರಿಗಳ ತೆರುವ ಕಾರ್ಯಾಚರಣೆಯಲ್ಲೂ ಬಿಬಿಎಂಪಿಯು ಇದೇ ಕ್ರಮವನ್ನು ಅನುಸರಿಸುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಕಾರ್ಯಾಚರಣೆಯನ್ನು ಜೋರು ಮಾಡಲಾಗಿದ್ದು. 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಸಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಆಸ್ತಿಗಳಿಗೆ ಚಿನ್ನದ ಬೆಲೆ ಇದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಕೆರೆ ಹಾಗೂ ಸರ್ಕಾರಿ ಜಾಗಗಳನ್ನು ವಶಪಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಳವಾಗಿದೆ. ಬಿಬಿಎಂಪಿ ಸಹ ಈ ರೀತಿಯ ಒತ್ತುವರಿಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಇದೀಗಿ ಒತ್ತುವರಿ ತಡೆಗೆ ಬೃಹತ್ ಕಾರ್ಯಾಚರಣೆಗಳನ್ನು ನಡೆಸುವುದಕ್ಕೆ ಪ್ರಾರಂಭಿಸಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಆಸ್ತಿಗಳಿಗೆ ಒಳ್ಳೆಯ ಬೆಲೆ ಇದೆ. ಆದರೆ ಕೆಲವರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಹಾಗೂ ಬಿಬಿಎಂಪಿಯ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಒತ್ತುವರಿ ಮಾಡಿಕೊಳ್ಳುವವರಿಗೆ ಬಿಸಿ ಮುಟ್ಟಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿ ಮಾಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂದುವರಿದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆರೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಿರುವುದಾಗಿ ಹೇಳಿದ್ದಾರೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಬರೋಬ್ಬರಿ 20 ಕೋಟಿಗೂ ಹೆಚ್ಚು ಬಿಬಿಎಂಪಿ ಹೇಳಿದೆ. ಈ ಮೂಲಕ ಕೋಟ್ಯಾಂತರ ರೂಪಾಯಿ ಆಸ್ತಿಯ ಸಂರಕ್ಷಣೆಯಾಗಿದೆ.

ಆಸ್ತಿ ವಿಚಾರದಲ್ಲೂ ಇದೇ ಮಾದರಿ: ಇನ್ನು ಆಸ್ತಿಗಳ ವಿಚಾರದಲ್ಲೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಇದೇ ಮಾದರಿಯ ಕಠಿಣ ಕ್ರಮಗಳನ್ನು ಅನುಸರಿಸುತ್ತಿದೆ. ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿ ಬಾಕಿ ಉಳಿಸಿಕೊಂಡಿರುವವರಿಗೆ ಚುಕುರು ಮುಟ್ಟಿಸಲಾಗಿದೆ. ಈಗಾಗಲೇ ಬಿಬಿಎಂಪಿಯ ಫೈನಲ್ ನೋಟಿಸ್‌ಗೆ ಹಲವರು ನಡುಗಿದ್ದು, ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡುತ್ತಿದ್ದಾರೆ.
ಇನ್ನು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬಿಬಿಎಂಪಿಯ ಈ ನಡೆಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಆಸ್ತಿ ತೆರಿಗೆ ಸಂಗ್ರಹ ಮಾಡುವುದರಲ್ಲಿ ಇರುವ ಉತ್ಸಾಹವನ್ನು ಬಿಬಿಎಂಪಿಯು ರೋಡ್ ಸರಿ ಮಾಡುವುದರಲ್ಲೂ ತೋರಿಸಬೇಕು ಅಂತ ಹೇಳಿದ್ದಾರೆ.












Click it and Unblock the Notifications