• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಸರಣಿ ಬಾಂಬ್ ಸ್ಫೋಟ: 12 ವರ್ಷದ ಬಳಿಕ ಆರೋಪಿ ಸೆರೆ

|

ಬೆಂಗಳೂರು, ಸೆಪ್ಟೆಂಬರ್ 21: ಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷದ ಬಳಿಕ ಆರೋಪಿಯನ್ನು ಸೆರೆಹಿಡಿಯಲಾಗಿದೆ.

2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ಆರೋಪಿ ಶೋಯಿಬ್ ಎಂಬಾತನನ್ನು ಸಿಸಿಬಿ ಪೊಲೀಸರು ಕೇರಳದಲ್ಲಿ ಸೋಮವಾರ ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ರೌಡಿಗಳಿಂದ ನಾಡಬಾಂಬ್ ದಾಳಿ: ಪೊಲೀಸ್ ಸಾವು

'ಇಬ್ಬರು ಇನ್‌ಸ್ಪೆಕ್ಟರ್‌ ನೇತೃತ್ವದ ತಂಡ ಕೇರಳದಲ್ಲಿದ್ದು, ಆರೋಪಿಯನ್ನು ಸದ್ಯದಲ್ಲೇ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ' ಎಂದೂ ಮಾಹಿತಿ ನೀಡಿದ್ದಾರೆ.

ಸರಣಿ ಬಾಂಬ್ ಸ್ಫೋಟದ ಆರೋಪಿ ಶೋಯಿಬ್‌ ಬಂಧನಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಇದೀಗ ಕೇಂದ್ರದ ತನಿಖಾ ತಂಡಗಳ ಸಹಾಯದಿಂದ ಆತನನ್ನು ಬಂಧಿಸಲಾಗಿದೆ' ಎಂದು ಸಿಸಿಬಿಯ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಹೇಳಿದ್ದಾರೆ.

   IPL2020 SRH VS RCB | RCB ಈ ವರ್ಷದ ಮೊದಲ ಮ್ಯಾಚ್ ಗೆಲ್ಲಲು ಏನು ಕಾರಣ ಗೊತ್ತಾ | Oneindia Kannada

   ಸಿಸಿಬಿಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು, ಖಚಿತ ಮಾಹಿತಿ ಮೇರೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದ ಬಳಿಕ ಪರಾರಿಯಾಗಿದ್ದ ಶೋಯಿಬ್, 12 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ.

   English summary
   The Anti Terror Cell (ATC) of the city police has arrested Shoaib, an accused in the 2008 Bengaluru serial bomb blast case. He has been deported from Dubai and was Arrested in Kerala on Monday evening.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X