Karnataka Budget 2025: ಚುನಾವಣೆ ಮೇಲೆ ಕಣ್ಣು: ಬೆಂಗಳೂರಿಗೆ ಬರೋಬ್ಬರಿ 1,800 ಕೋಟಿ ರೂ. ಅನುದಾನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಾರ್ಚ್ 7ರಂದು ಬಜೆಟ್ ಮಂಡನೆ ಮಾಡಿದ್ದು. ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಯೋಜನೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿರುವ ಸಂದರ್ಭದಲ್ಲಿಯೇ ಬೆಂಗಳೂರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರವು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಬಾರಿ ಬಜೆಟ್‌ನಲ್ಲಿ ಬ್ರ್ಯಾಂಡ್ ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನೇ ನೀಡಲಾಗಿದೆ.
ಹೌದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆದು ಬರೋಬ್ಬರಿ 5 ವರ್ಷಗಳೇ ಆಗಿವೆ. ಇದೀಗ ಬೆಂಗಳೂರು ಚುನಾವಣೆ ಮಾಡಲೇಬೇಕು ಎನ್ನುವ ವಾತಾವರಣವಿದೆ. ಅಲ್ಲದೆ ನಗರದಲ್ಲಿ ಅಭಿವೃದ್ಧಿಗೆ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಘೋಷಣೆ ಮಾಡಿದೆ. ಬ್ರ್ಯಾಂಡ್ ಬೆಂಗಳೂರಿಗೆ ಈ ಬಜೆಟ್‌ನಲ್ಲಿ 1,800 ಕೋಟಿ ಅನುದಾನ ಮೀಸಲಿರಿಸಲಾಗಿದೆ.

ಅಲ್ಲದೆ ಟನಲ್ ರೋಡ್, ಮೆಟ್ರೋ ಅಭಿವೃದ್ಧಿ ಹಾಗೂ ಬೆಂಗಳೂರಿನ ಹೃದಯಭಾಗ ಎಂದೇ ಪರಿಗಣಿಸಲಾಗುವ ಹಾಗೂ ನಗರ ಸಂಚಾರದ ಕೇಂದ್ರ ಬಿಂದುವಾಗಿರುವ ಮೆಜೆಸ್ಟಿಕ್ ಅಭಿವೃದ್ಧಿಗೆ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ. ಅಲ್ಲದೆ ನಗರದಲ್ಲಿ ಕಾನೂನು ಹಾಗೂ ಸುಸವ್ಯವಸ್ಥೆಗೂ ಆದ್ಯತೆ ನೀಡಲಾಗಿದೆ.
3 ಸಾವಿರ ಕೋಟಿ ರೂಪಾಯಿ: ಬೆಂಗಳೂರು ಅಭಿವೃದ್ಧಿಗೆ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ಒಟ್ಟು 21 ಯೋಜನೆಗಳಿಗೆ ಅನುದಾನ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಹವಾಮಾನ ವೈಪರೀತ್ಯ ಹಾಗೂ ಎಸ್‌ಟಿಪಿ ಮತ್ತು ಒಳಚರಂಡಿ ವ್ಯವಸ್ಥೆಗಾಗಿ ಬರೋಬ್ಬರಿ 3000 ಸಾವಿರ ಕೋಟಿ ರೂಪಾಯಿಯನ್ನು ಘೋಷಣೆ ಮಾಡಲಾಗಿದೆ.
ಮೆಜೆಸ್ಟಿಕ್ ಪುನರ್ ಅಭಿವೃದ್ಧಿ: ಇನ್ನು ಈ ಬಾರಿಯ ಬಜೆಟ್‌ನಲ್ಲಿ ಮೆಜೆಸ್ಟಿಕ್ ನಿಲ್ದಾಣದ ಪುನರ್ ಅಭಿವೃದ್ಧಿಗೂ ಸರ್ಕಾರ ಅನುದಾನ ಮೀಸಲಿರಿಸಿದೆ. ಸಾರಿಗೆ ಹಬ್‌ನೊಂದಿಗೆ ಪ್ರಾಜೆಕ್ಟ್ ರೂಪಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಅಲ್ಲದೆ ಸಾರ್ವಜನಿಕರ ಅನುಕೂಲಕ್ಕಾಗಿ ಈ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಆಗಲಿದೆ.
ಬೆಂಗಳೂರಿನ ಒಳಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿ, ಟನಲ್ ರಸ್ತೆ ಹಾಗೂ ಮೆಟ್ರೋ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಬಿಬಿಎಂಪಿ ಚುನಾವಣೆಯ ಮೇಲೆ ಕಣ್ಣು: ಇನ್ನು ಈ ಬಾರಿ ರಾಜ್ಯ ಸರ್ಕಾರವು ಬೆಂಗಳೂರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಂಪರ್ ಕೊಡುಗೆಗಳನ್ನು ನೀಡಿರುವುದರ ಹಿಂದೆ ಬಿಬಿಎಂಪಿ ಚುನಾವಣೆಯ ದೃಷ್ಟಿಕೋನ ಇದೇ ಎಂದೇ ಹೇಳಲಾಗುತ್ತಿದೆ. ಬೆಂಗಳೂರಿನ ಚುನಾವಣೆಯನ್ನು ಕಳೆದ ಐದು ವರ್ಷಗಳಿಂದ ಮಾಡಿಲ್ಲ.
ಇದೀಗ ಮೇಯರ್ ಹಾಗೂ ಉಪ ಮೇಯರ್ ಮತ್ತು ಪಾಲಿಕೆಯ ಸದಸ್ಯರಿಲ್ಲದೆ ಭಾರೀ ಸಮಸ್ಯೆಗಳು ಎದುರಾಗಿವೆ. ಈ ನಡುವೆ ಚುನಾವಣೆ ನಡೆಸಲೇಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ. ಈಚೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಗೆ ಸಿದ್ಧರಾಗುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದರು.












Click it and Unblock the Notifications